Karnataka Assembly Election 2023; ಸರತಿ ಸಾಲಿನಲ್ಲಿ ನಿಂತಿದ್ದ ವ್ಯಕ್ತಿ ಕುಸಿದು ಬಿದ್ದು ಅಸ್ವಸ್ಥ!

Kalaburagi vote
Published on

ಕಲಬುರಗಿ: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ 7 ಗಂಟೆಯಿಂದಲೇ ಮತದಾರರು ವೋಟ್​​ ಮಾಡುತ್ತಿದ್ದಾರೆ. ಮತದಾರು ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸುತ್ತಿದ್ದಾರೆ. ಮತ ಹಾಕಲು ನಿಂತಿದ್ದ ವ್ಯಕ್ತಿಯೊಬ್ಬರು ಏಕಾಎಕಿ ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದಾರೆ.

ಹೃದಯದ ಬಡಿತ ಕಡಿಮೆಯಾಗಿ ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದಾರೆ. ಕೂಡಲೇ ಸ್ಥಳದಲ್ಲೇ ಸರದಿ ಸಾಲಿನಲ್ಲಿ ನಿಂತಿದ್ದ ವೈದ್ಯರು ಪ್ರಥಮ ಚಿಕಿತ್ಸೆ ನೀಡಿದ್ದಾರೆ. ಈ ಘಟನೆ ಕಲಬುರಗಿಯ ಸಂತೋಷ್ ಕಾಲನಿಯ ಮತಗಟ್ಟೆಯಲ್ಲಿ ನಡೆದಿದೆ.

ಡಾ.ರುದ್ರವಾಡಿ ಅವರು ಪ್ರಥಮ ಚಿಕಿತ್ಸೆ ನೀಡಿ ನಂತರ ಆ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಸಕಾಲಕ್ಕೆ ವೈದ್ಯರ ಸಹಾಯದಿಂದ ವ್ಯಕ್ತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net