ಜೆಡಿಎಸ್ ಸೇರ್ಪಡೆಗೊಂಡ ಆಯನೂರು ಮಂಜುನಾಥ್

ayanur manjunath
Published on

ಶಿವಮೊಗ್ಗ : ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿ ಪಕ್ಷಾಂತರ ಪರ್ವ, ರಾಜೀನಾಮೆ ಪ್ರಹಸನ ಜೋರಾಗಿಯೇ ನಡೆಯುತ್ತಿದ್ದು, ರಾಜ್ಯ ಬಿಜೆಪಿಗೆ ಇದೀಗ ಮತ್ತೊಂದು ಹಿನ್ನಡೆಯಾಗಿದೆ. ಶಿವಮೊಗ್ಗ ಜಿಲ್ಲೆಯ ಆಯನೂರು ಮಂಜುನಾಥ್ ಎಂಎಲ್‌ಸಿ ಮತ್ತು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

ಎಚ್ ಡಿ ಕುಮಾರಸ್ವಾಮಿ ಅವರು ಆಯನೂರು ಮಂಜುನಾಥ್ ಅವರಿಗೆ ಬಿ ಫಾರ್ ನೀಡಿದ್ದಾರೆ. ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರಕ್ಕೆ ನಾಳೆ ಜೆಡಿಎಸ್ ಅಭ್ಯರ್ಥಿಯಾಗಿ ಆಯನೂರು ಮಂಜುನಾಥ್ ನಾಮಪತ್ರ ಸಲ್ಲಿಸಲಿದ್ದಾರೆ.

ಆಯನೂರು ಮಂಜುನಾಥ್ ಅವರು ಇಂದು ಮಧ್ಯಾಹ್ನ ಬಿಜೆಪಿ ಹಾಗೂ ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ನೀಡಿದ ಬೆನ್ನಲ್ಲೇ ಜೆಡಿಎಸ್ ವರಿಷ್ಠ ಎಚ್ ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದಾರೆ.

ಮಂಜುನಾಥ್ ಅವರನ್ನು ಶಿವಮೊಗ್ಗದಿಂದ ಕಣಕ್ಕಿಳಿಸುವುದಿಲ್ಲ ಎಂದು ಪಕ್ಷ ದೃಢಪಡಿಸಿದ ಬಳಿಕ ಅವರ ರಾಜೀನಾಮೆ ಘೋಷಣೆ ಹೊರಬಿದ್ದಿತ್ತು. 'ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ಸಲ್ಲಿಸುತ್ತೇನೆ. ಗುರುವಾರ ಶಿವಮೊಗ್ಗ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಲಿದ್ದೇನೆ. ನಾನು ಯಾವ ಪಕ್ಷದಿಂದ ಸ್ಪರ್ಧಿಸುತ್ತೇನೆ ಎಂಬುದನ್ನು ಮಧ್ಯಾಹ್ನದೊಳಗೆ ಪ್ರಕಟಿಸುತ್ತೇನೆ' ಎಂದು ಆಯನೂರು ಮಂಜುನಾಥ್ ಹೇಳಿದ್ದರು. ಅದರಂತೆ ಇದೀಗ ಅಧಿಕೃತವಾಗಿ ಜೆಡಿಎಸ್​​ಗೆ ಸೇರ್ಪಡೆಗೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net