

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವುದನ್ನು ಖಂಡಿಸಿ ಇಂದು ಇಡೀ ಕರ್ನಾಟಕ ಸ್ತಬ್ಧವಾಗಲಿದೆ. ರಾಜ್ಯಾದ್ಯಂತ ಬಂದ್ ಬಿಸಿ ಆರಂಭವಾಗಿದ್ದು, ಬೆಳಗ್ಗೆಯಿಂದಲೇ ಅಂಗಡಿ-ಮಂಗಟ್ಟುಗಳನ್ನು ಮುಚ್ಚಲಾಗಿದೆ. ಈಗಾಗಲೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಇಂದು ಪ್ರತಿಭಟನೆಯ ಕಾವು ತಟ್ಟಲಿದೆ. ಸಾವಿರಾರು ಸಂಘಟನೆಗಳು ಬಂದ್ಗೆ ಸಂಪೂರ್ಣ ಬೆಂಬಲ ನೀಡರುವುದರಿಂದ ಇಡೀ ಕರ್ನಾಟಕ ಇಂದು ಸ್ತಬ್ಧವಾಗಲಿದೆ.
ಕಳೆದ ಮಂಗಳವಾರವಷ್ಟೇ ಬೆಂಗಳೂರು ಬಂದ್ ಆಚರಿಸಲಾಯಿತು. ಯಶಸ್ವಿಯೂ ಆಯಿತು. ಇಂದು ಅಖಂಡ ಕರ್ನಾಟಕ ಬಂದ್ ಆಚರಣೆ ಆರಂಭವಾಗಿದೆ. ಸಂಚಾರ ಸಹ ವಿರಳವಾಗಿದೆ. ಇಂದಿನ ಬಂದ್ ಪರಿಣಾಮ ಹೆಚ್ಚಾಗಿರಲಿದೆ. ಬಂದ್ ಹಿನ್ನೆಲೆಯ್ಲಲಿ ಇಂದು ರಾಜ್ಯದಲ್ಲಿ ಏನೆಲ್ಲ ಸೇವೆಗಳು ಇರುತ್ತವೆ ಮತ್ತು ಏನೆಲ್ಲ ಬಂದ್ ಆಗಲಿವೆ ಎಂಬುದನ್ನು ನಾವೀಗ ತಿಳಿಯೋಣ.
* ಆಸ್ಪತ್ರೆ
* ಮೆಡಿಕಲ್ ಸ್ಟೋರ್
* ಹಾಲಿನ ಬೂತ್
* ಅಗತ್ಯ ವಸ್ತುಗಳು
* ಮೆಟ್ರೋ
* ಆಂಬ್ಯುಲೆನ್ಸ್
*ಬಿಎಂಟಿಸಿ
*ಕೆಎಸ್ಆರ್ಟಿಸಿ
ಏನಿರಲ್ಲ..?
* ಆಟೋ, ಕ್ಯಾಬ್
* ಗೂಡ್ಸ್ ವಾಹನಗಳು
* ಖಾಸಗಿ ಬಸ್ಗಳು
* ಥಿಯೇಟರ್
* ಸೂಪರ್ ಮಾರ್ಕೆಟ್
* ಪೆಟ್ರೋಲ್ ಬಂಕ್
* ಶಾಲಾ -ಕಾಲೇಜ್
* ಅಂಗಡಿಗಳು
* ಬೀದಿ ಬದಿ ಅಂಗಡಿಗಳು
* ಜ್ಯುವೆಲ್ಲರಿ ಶಾಪ್ಗಳು
* ಕೈಗಾರಿಕೆಗಳು
* ಹೋಟೆಲ್ಗಳು
* ಮಾಲ್ಗಳು
ಕರ್ನಾಟಕದಿಂದ ತಮಿಳುನಾಡಿಗೆ 15 ದಿನಗಳವರೆಗೆ ಪ್ರತಿದಿನ 5 ಸಾವಿರ ಕ್ಯೂಸೆಕ್ ನೀರನ್ನು ಹರಿಸಬೇಕೆಂದು ಸೆ.12ರಂದು ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿದ್ದ ಆದೇಶವನ್ನು ಪಾಲಿಸುವಂತೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಸೆ.18ರಂದು ಆದೇಶ ಹೊರಡಿಸಿತ್ತು. ಇದರ ವಿರುದ್ಧ ಸುಪ್ರೀಂಕೋರ್ಟ್ಗೆ ಕರ್ನಾಟಕ ಮೇಲ್ಮನವಿ ಸಲ್ಲಿಸಿತ್ತು. ಸೆ.21ರಂದು ತೀರ್ಪು ಪ್ರಕಟಿಸಿದ ನ್ಯಾಯಾಲಯ CWMA ಆದೇಶವನ್ನು ಎತ್ತಿಹಿಡಿದಿತ್ತು. ಅದರಂತೆ ರಾಜ್ಯ ಸರ್ಕಾರ ನೀರು ಬಿಡುಗಡೆ ಸಹ ಮಾಡಿತು. ಅತ್ತ ಸಂಘಟನೆಗಳು ಬಂದ್ ಸಹ ಆಚರಿಸಿದವು. ಇದರ ನಡುವೆ ಮತ್ತೆ 3000 ಸಾವಿರ ಕ್ಯೂಸೆಕ್ ನೀರು ಹರಿಸಲು ಕಾವೇರಿ ನದಿ ನೀರು ಸಮಿತಿ ಶಿಫಾರಸು ಮಾಡಿರುವುದರಿಂದ ಇಂದಿನ ಕರ್ನಾಟಕ ಬಂದ್ ತೀವ್ರತೆ ಪಡೆದುಕೊಳ್ಳುವ ಎಲ್ಲ ಲಕ್ಷಣಗಳು ಗೋಚರಿಸುತ್ತಿವೆ.
ಇಂದು ರಾಜ್ಯದೆಲ್ಲೆಡೆ ಭಾರೀ ಪ್ರತಿಭಟನೆಗಳು ನಡೆಯಲಿದೆ. ಅದರಲ್ಲಿ ರಸ್ತೆ ತಡೆಯೇ ಪ್ರಮುಖವಾಗಿರಲಿದ್ದು, ಎಲ್ಲ ಹೆದ್ದಾರಿಗಳನ್ನು ಬಂದ್ ಮಾಡಲು ಕನ್ನಡ ಪರ ಸಂಘಟನೆಗಳು ಪ್ಲಾನ್ ಮಾಡಿವೆ. ಹೀಗಾಗಿ ರಸ್ತೆಗಿಳಿಯುವ ಮುನ್ನ ವಾಹನ ಸವಾರರು ತುಂಬಾ ಎಚ್ಚರಿಕೆ ವಹಿಸುವುದು ಸೂಕ್ತ. ಇಲ್ಲವಾದಲ್ಲಿ ಪ್ರತಿಭಟನೆಯ ನಡುವೆ ಸಿಲುಕಿ ಪರದಾಡಬೇಕಾಗುತ್ತದೆ.