ತೋಟಗಾರಿಕಾ ಬೆಳೆಗಳ ಉತ್ಪಾದನೆ, ಸಂಸ್ಕರಣೆ, ಬ್ರಾಂಡಿಂಗ್​​ಗೆ ಹೆಚ್ಚಿನ ಒತ್ತು: ಶೀತಲ ಘಟಕಗಳ ನಿರ್ಮಾಣ

siddaramiah
Published on

ಬೆಂಗಳೂರು: 14ನೇ ಬಾರಿ ಬಜೆಟ್​​​ನ್ನು ಮಂಡಿಸುತ್ತಿರುವ ಸಿಎಂ ಸಿದ್ಧರಾಮಯ್ಯನವರು ತೋಟಗಾರಿಕೆ ಅಡಿಯಲ್ಲಿ ಬರುವ ಉತ್ಪನ್ನ ಹಾಗೂ ಬೆಳೆಗಾರರಿಗೆ ಶುಭ ಸುದ್ದಿಯನ್ನು ನೀಡಿದ್ದಾರೆ.

ಇದನ್ನೂ ಓದಿ: ರಾಜ್ಯ ಬಜೆಟ್​: ರೇಷ್ಮೆಗೂಡು ಖರೀದಿ ಉತ್ತೇಜನಕ್ಕೆ 5 ಲಕ್ಷ ರೂ.ವರೆಗೆ ಶೂನ್ಯ ಬಡ್ಡಿದರಲ್ಲಿ ಸಾಲ, ಹೈಟೆಕ್ ಮಾರುಕಟ್ಟೆ ಅಭಿವೃದ್ಧಿ

ರೈತರ ಆದಾಯವನ್ನು ಹೆಚ್ಚಿಸುವುದರಲ್ಲಿ ತೋಟಗಾರಿಕೆ ಬೆಳೆಗಳು ಪ್ರಮುಖ ಪಾತ್ರ ವಹಿಸುತ್ತವೆ. ತೋಟಗಾರಿಕಾ ವಲಯದಲ್ಲಿನ ರಾಜ್ಯದ ಸಾಮರ್ಥ್ಯವನ್ನು ಹೆಚ್ಚಿಸಲು ತೆಂಗು, ಅಡಿಕೆ, ದ್ರಾಕ್ಷಿ, ದಾಳಿಂಬೆ, ಮಾವು ಮತ್ತಿತರ ಹಣ್ಣು, ತರಕಾರಿ, ಹೂವುಗಳು ಸೇರಿದಂತೆ ತೋಟಗಾರಿಕಾ ಬೆಳೆಗಳ ಉತ್ಪಾದನೆ, ಸಂಸ್ಕರಣೆ, ಬ್ರಾಂಡಿಂಗ್ ಮತ್ತು ರಫ್ತಿಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಸಿಎಂ ಹೇಳಿದ್ದಾರೆ.

2023-24ನೇ ಸಾಲಿನಲ್ಲಿ ಐದು ಕೋಟಿ ವೆಚ್ಚದಲ್ಲಿ ತೋಟಗಾರಿಕಾ ಉತ್ಪನ್ನಗಳಿಗಾಗಿ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲಾಗುವುದರ ಜತೆಗೆ ತೋಟಗಾರಿಕಾ ಉತ್ಪನ್ನಗಳ ಸಂಸ್ಕರಣೆಗೆ ಎಂಟು ಶೀತಲ ಘಟಕಗಳನ್ನು ನಿರ್ಮಾಣ ಮಾಡಲಾಗುವುದು ಎಂದು ಸಿಎಂ ಘೋಷಿಸಿದ್ದಾರೆ.

ಅನನ್ಯವಾದ ರುಚಿ ಮತ್ತು ಕಂಪನ್ನು ಹೊಂದಿರುವ ಚಿಕ್ಕಮಗಳೂರು ಕೊಡಗು ಮತ್ತು ಬಾಬಾ ಬುಡನಗಿರಿಯ ಅರೇಬಿಕಾ ಕಾಫಿ ವೈವಿಧ್ಯಗಳು ಉತ್ತಮ ಬ್ರ್ಯಾಂಡ್​​ ಹೊಂದಿವೆ. ರಾಜ್ಯದ ಕಾಫಿಯನ್ನು ಇನ್ನಷ್ಟು ಪ್ರಚುರಪಡಿಸಿ ಜನಪ್ರಿಯಗೊಳಿಸಲು ಮತ್ತು ಕಾಫಿ ಎಕೋ ಟೂರಿಸಂನ್ನು ಉತ್ತೇಜಿಸಲು ಕರ್ನಾಟಕದ ಕಾಫಿಗೆ ಬ್ರಾಂಡಿಂಗ್ ಮಾಡಲು ಕ್ರಮ ವಹಿಸಲಾಗುವುದು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಎಣ್ಣೆ ಪ್ರಿಯರ ಜೇಬಿಗೆ ಕತ್ತರಿ; ಬಿಯರ್​​ ಮೇಲಿನ ಅಬಕಾರಿ ಸುಂಕ ಶೇಕಡ 10ರಷ್ಟು ಹೆಚ್ಚಳ

ವಿಶೇಷ ಕಂಪು, ರುಚಿ ಮತ್ತು ಸೊಗಡಿನಿಂದ ಜನಮನದಲ್ಲಿ ನೆಲೆಸಿರುವ ಮೈಸೂರು ಮಲ್ಲಿಗೆ, ನಂಜನಗೂಡು ರಸಬಾಳೆ ಹಾಗೂ ಮೈಸೂರು ವೀಳ್ಯದೆಲೆಗಳು GI Tagಗಳನ್ನು ಪಡೆದಿವೆ. ಇವುಗಳ ಉತ್ಪಾದನೆ ಸಂಶೋಧನೆ, ಮಾರುಕಟ್ಟೆ ಮತ್ತು ಬ್ರಾಂಡಿಂಗ್‌ ಉತ್ತೇಜಿಸಲು ನೂತನ ಕಾರ್ಯಕ್ರಮವನ್ನು ರೂಪಿಸಲಾಗುವುದು ಎಂದು ಸಿದ್ದರಾಮ್ಯಯ್ಯ ತಿಳಿಸಿದ್ದಾರೆ.

ವಾಣಿಜ್ಯ ಹೂವಿನ ರಫ್ತಿನಲ್ಲಿ ಕರ್ನಾಟಕ ಅಗ್ರಸ್ಥಾನ ಹೊಂದುವ ಸಾಮರ್ಥ್ಯ ಹೊಂದಿದ್ದು, ಇವುಗಳ ತಳಿಗಳ ಕೊರತೆ ನಿವಾರಿಸಲು ಅಂತಹ ತಳಿಗಳನ್ನು ಆಮದು ಮಾಡಿಕೊಂಡು ರೈತರಿಗೆ ಕೈಗೆಟಕು ದರದಲ್ಲಿ ಒದಗಿಸಲು ಕ್ರಮವಹಿಸಲಾಗುವುದ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ತೋಟಗಾರಿಕಾ ಕ್ಷೇತ್ರದ ಪ್ರಾಯೋಗಿಕ ಅರಿವು ಮೂಡಿಸಲು ವಿದ್ಯಾರ್ಥಿಗಳಿಗಾಗಿ ತೋಟಗಾರಿಕೆಯನ್ನು ಪರಿಚಯಿಸಲಾಗುವುದ ಎಂದು ಸಿಎಂ ಹೇಳಿದ್ದಾರೆ.(ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net