ಮಹಿಳೆಯರ ದಿನದಂದೇ ಲೆಕ್ಕಾಚಾರ; ಮಾ. 8ರಂದು ರಾಜ್ಯ ಬಜೆಟ್ ಮಂಡನೆ

Vidhan Soudha 1
Published on

ಬೆಂಗಳೂರು: ಕೇಂದ್ರ ಸರ್ಕಾರದ ಬಜೆಟ್ಟನ್ನು ಮಹಿಳೆಯೇ ಮಂಡಿಸಿದರೆ ರಾಜ್ಯ ಸರ್ಕಾರದ ಬಜೆಟ್​ ಮಹಿಳೆಯರ ದಿನದಂದೇ ಮಂಡನೆ ಆಗಲಿದೆ. ಕೆಲವೇ ದಿನಗಳ ಹಿಂದಷ್ಟೇ ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರದ ಬಜೆಟ್​ ಮಂಡಿಸಿದ್ದು, ಇದೀಗ ಕರ್ನಾಟಕ ರಾಜ್ಯ ಸರ್ಕಾರ ಕೂಡ ಬಜೆಟ್ ಮಂಡನೆಗೆ ಸಜ್ಜಾಗಿದ್ದು, ಅದಕ್ಕಾಗಿ ಅಂತಾರಾಷ್ಟ್ರೀಯ ಮಹಿಳೆಯರ ದಿನವನ್ನು ಆರಿಸಿಕೊಂಡಿದೆ. ಅರ್ಥಾತ್​ ಅಂತಾರಾಷ್ಟ್ರೀಯ ಮಹಿಳೆಯರ ದಿನವಾದ ಮಾರ್ಚ್ 8ರಂದು ರಾಜ್ಯ ಬಜೆಟ್ ಮಂಡನೆ ಆಗಲಿದೆ.

ಮಾ. 8ರ ಸೋಮವಾರದಂದು ರಾಜ್ಯದ ಬಜೆಟ್ ಮಂಡನೆ ಆಗಲಿದೆ ಎಂಬ ಮಾಹಿತಿಯನ್ನು ಗೃಹಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಮಾ. 4ರಿಂದ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಮಾ. 31ರ ವರೆಗೂ ನಡೆಯಲಿದೆ ಎಂಬುದಾಗಿ ಅವರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net