ಅತಿಹೆಚ್ಚು ತೆರಿಗೆ ಸಂಗ್ರಹಿಸುವ ರಾಜ್ಯಗಳಲ್ಲಿ ಕರ್ನಾಟಕಕ್ಕೆ 2ನೇ ಸ್ಥಾನ: ಗೆಹ್ಲೋಟ್

Karnataka Legislative Assembly Session
Published on

ಬೆಂಗಳೂರು: ದೇಶದಲ್ಲಿಯೇ ಅತಿ ಹೆಚ್ಚು ತೆರಿಗೆ ಸಂಗ್ರಹಿಸಿ ಕೊಡುವ ರಾಜ್ಯಗಳಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ ಎಂದು  ರಾಜ್ಯಪಾಲ ಥಾವರ್​ಚಂದ್​ ಗೆಹ್ಲೋಟ್ ಅವರು ಕರ್ನಾಟಕ ವಿಧಾನ ಮಂಡಲದ ಬಜೆಟ್ ಅಧಿವೇಶನ ಉದ್ದೇಶಿಸಿ ಭಾಷಣ ಮಾಡುವ ವೇಳೆ ಹೇಳಿದ್ದಾರೆ.

ಕರ್ನಾಟಕ ವಿಧಾನ ಮಂಡಲದ ಬಜೆಟ್ ಅಧಿವೇಶನದ ಆರಂಭದ ದಿನ ಜಂಟಿ ಅಧಿವೇಶನ ಉದ್ದೇಶಿಸಿ ಸೋಮವಾರ ಮಾತನಾಡಿದ  ರಾಜ್ಯಪಾಲ ಥಾವರ್​ಚಂದ್​ ಗೆಹ್ಲೋಟ್ ಅವರು,  ವಿವಿಧ ಮೂಲಗಳಿಂದ ಸಿಗಬೇಕಾದಷ್ಟು ಸಂಪನ್ಮೂಲಗಳು ಸಿಗುತ್ತಿಲ್ಲ. ದೇಶದಲ್ಲಿಯೇ ಅತಿ ಹೆಚ್ಚು ತೆರಿಗೆ ಸಂಗ್ರಹಿಸಿ ಕೊಡುವ ರಾಜ್ಯಗಳಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ ಎಂದಿದ್ದಾರೆ.

ತೆರಿಗೆಯ ಪಾಲು ಪಡೆಯುವ ವಿಚಾರದಲ್ಲಿ 10ನೇ ಸ್ಥಾನದಲ್ಲಿದೆ. ನಮಗೆ ನ್ಯಾಯ ಮತ್ತು ನ್ಯಾಯಯುತವಾಗಿ ಸಿಗಬೇಕಾದ ಪಾಲನ್ನು ಪಡೆಯಲು ನನ್ನ ಸರ್ಕಾರವು ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ರಾಜ್ಯಪಾಲರು ಹೇಳಿದ್ದಾರೆ.

ಹೊಸ ಸರ್ಕಾರ ರಚನೆಯಾದ ನಂತರ ಕಂದಾಯ ಇಲಾಖೆಯ ಜಿಲ್ಲಾಧಿಕಾರಿ ಉಪವಿಭಾಗಾಧಿಕಾರಿಗಳಲ್ಲಿ ಒಟ್ಟು 93,350 ಪ್ರಕರಣಗಳು ಬಾಕಿ ಇದ್ದು, ಈ ಪೈಕಿ 2024 ರ ಫೆಬ್ರವರಿ 5 ರ ವರೆಗೆ 84,253 ಪ್ರಕರಣಗಳನ್ನು ಇತ್ಯರ್ಥ ಮಾಡಲಾಗಿದೆ. 5787 ಪ್ರಕರಣಗಳು ಬಾಕಿ ಉಳಿದಿವೆ ಎಂದು ಅವರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net