ಉಪ ಚುನಾವಣೆ: ಅಭ್ಯರ್ಥಿಗಳನ್ನು ಘೋಷಿಸಿದ ಕಾಂಗ್ರೆಸ್ ಹೈಕಮಾಂಡ್

congress
Published on

ಬೆಂಗಳೂರು: ರಾಜ್ಯದಲ್ಲಿ ಮುಂದಿನ ತಿಂಗಳು ನಡೆಯಲಿರುವ ಎರಡು ವಿಧಾನಸಭಾ ಕ್ಷೇತ್ರ ಸೇರಿದಂತೆ ತೆರವಾಗಿರುವ ಸಿಂದಗಿ ವಿಧಾಸಭಾ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್​ ಅಭ್ಯರ್ಥಿಗಳನ್ನು ಎಐಸಿಸಿ ಇಂದು ಅಂತಿಮಗೊಳಿಸಿದೆ.

ಬಸವಕಲ್ಯಾಣಕ್ಕೆ ಮಲ್ಲಮ್ಮ ನಾರಾಯಣ ರಾವ್, (ದಿವಂಗತ ಶಾಸಕ ನಾರಾಯಣ ರಾವ್ ಪತ್ನಿ), ಮಸ್ಕಿಗೆ ಬಸವನಗೌಡ ಆರ್ ತುರುವಿಹಾಳ್, ಸಿಂದಗಿ ಕ್ಷೇತ್ರಕ್ಕೆ ಅಶೋಕ್ ಮನಗೂಳಿ (ಚುನಾವಣೆ ದಿನಾಂಕ ಇನ್ನೂ ಘೋಷಣೆಯಾಗಿಲ್ಲ) ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ.

ಬೆಳಗಾವಿ ಲೋಕಸಭಾ ಕ್ಷೇತ್ರದ ಟಿಕೆಟ್ ಘೋಷಣೆ ಮಾಡದೇ ಕಾದುನೋಡುವ ತಂತ್ರವನ್ನು ಕಾಂಗ್ರೆಸ್ ಹೈಕಮಾಂಡ್ ಅನುಸರಿಸಿದೆ. ಸತೀಶ್ ಜಾರಕಿಹೊಳಿ ಅಭ್ಯರ್ಥಿ ಆಗುವಂತೆ ರಾಜ್ಯ ನಾಯಕರು ಹೇಳಿದ್ದರು. ಆದರೆ, ಸಿಡಿ ಪ್ರಕರಣದ ಬಳಿಕ ಸತೀಶ್ ಅವರು ಹಿಂದೇಟು ಹಾಕಿದ್ದರು. ಅಲ್ಲದೇ ಲಕ್ಷ್ಮೀ ಹೆಬ್ಬಾಳ್ಕರ್ ಹೆಸರನ್ನೂ ಶಿಫಾರಸು ಮಾಡಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net