

ತಿರುಮಲ: ಆಂಧ್ರಪ್ರದೇಶದ ತಿರುಮಲದಲ್ಲಿ ನಿರ್ಮಾಣಗೊಂಡಿರುವ ಕರ್ನಾಟಕ ಛತ್ರ (ಮೈಸೂರು ಕಾಂಪ್ಲೆಕ್ಸ್) ಶ್ರೀ ಕೃಷ್ಣರಾಜೇಂದ್ರ ಒಡೆಯರ್ ಕಲ್ಯಾಣ ಮಂಟಪ ಬ್ಲಾಕ್ ಅನ್ನು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಉದ್ಘಾಟಿಸಿದರು.
ರಾಮಲಿಂಗಾ ರೆಡ್ಡಿ ಮಾತನಾಡಿ, ವಿಐಪಿ ಬ್ಲಾಕ್ ಅಂತಿಮ ಹಂತದ ಕಾಮಗಾರಿ ಪ್ರಗತಿಯಲ್ಲಿವೆ. 36 ಕೊಠಡಿಗಳ ವಿಐಪಿ ಬ್ಲಾಕ್, ಕಲ್ಯಾಣಿ ಮತ್ತು ಕರ್ನಾಟಕ ಛತ್ರದ ದೇವಸ್ಥಾನದ ಉದ್ಘಾಟನೆ ಸಮಾರಂಭ ಸೆಪ್ಟೆಂಬರ್‌ನಲ್ಲಿ ನಡೆಯಲಿದೆ. ಈ ಸಮಾರಂಭಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಮತ್ತು ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಸೇರಿ ಅನೇಕ ಗಣ್ಯರು ಭಾಗವಹಿಸಲಿದ್ದಾರೆ. ಈ ಮೂಲಕ ಕರ್ನಾಟಕ ಭಕ್ತರ ಕನಸು ನನಸಾಗಲಿದೆ ಎಂದರು.
ಈ ಕಲ್ಯಾಣ ಮಂಟಪ 500 ಆಸನಗಳ ಸಾಮರ್ಥ್ಯ, 13 ಕೊಠಡಿಗಳನ್ನು ಒಳಗೊಂಡಿದೆ. ರಾಜ್ಯದಿಂದ ಬಂದು ತಿರುಮಲದಲ್ಲಿ ಮದುವೆ, ನಾಮಕರಣ ಮೊದಲಾದ ಶುಭ ಸಮಾರಂಭಗಳನ್ನು ಆಯೋಜನೆ ಮಾಡಬಹುದು. ಆನ್‌ಲೈನ್‌ನಲ್ಲಿ ಬುಕ್ಕಿಂಗ್ ಸೌಲಭ್ಯ ಕಲ್ಪಿಸುವುದಾಗಿ ಸಚಿವರು ವಿವರಿಸಿದರು.