

ಬೆಂಗಳೂರು: ಕಳೆದ ಶನಿವಾರ (ಮೇ 20) ಕಂಠೀರವ ಸ್ಟೇಡಿಯಂನಲ್ಲಿ 8 ಮಂದಿ ಸಚಿವರೊಂದಿಗೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಹಾಗೂ ಡಿ.ಕೆ.ಶಿವಕುಮಾರ್ ಅವರು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದರು. ಇದಾದ ಒಂದು ವಾರದ ಬಳಿಕ ಸಂಪುಟ ವಿಸ್ತರಣೆಯಾಗಿದ್ದು, ಇಂದು (ಮೇ 27) ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ 24 ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಿದರು.
ಇದೀಗ ಸಚಿವರು ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆ ಯಾರಿಗೆ, ಯಾವ ಖಾತೆ ಸಿಗಬಹುದು ಎಂಬ ಕುತೂಹಲ ಇದೀಗ ಮೂಡಿದೆ. ಕೆಲ ಪ್ರಭಾವಿ ಸಚಿವರು ತಮಗೇ ಇಂತಹದ್ದೇ ಖಾತೆ ಬೇಕೆಂದು ಬೇಡಿಕೆ ಸಲ್ಲಿಸಿದ್ದಾರೆ ಎಂದು ಹೇಳಲಾಗಿದೆ. ಒಟ್ಟಾರೆಯಾಗಿ ಸಧ್ಯದಲ್ಲೇ ನೂತನ ಸಚಿವರಿಗೆ ಖಾತೆ ಹಂಚಿಕೆಯಾಗಲಿದ್ದು, ಜನರ ಕುತೂಹಲಕ್ಕೆ ಉತ್ತರ ಸಿಗಲಿದೆ. ಅಂತೆಯೇ ಸಚಿವರುಗಳಿಗೆ ಹಂಚಿಕೆಯಾಗಲಿರುವ ಸಂಭಾವ್ಯ ಖಾತೆಗಳು ಹೀಗಿವೆ...