ಕರೊನಾ ಬುಲೆಟಿನ್​: ಸೋಂಕು ಬರೀ 3,652; ಗುಣವಾದವರು ಬರೋಬ್ಬರಿ 8,053

corona virus2
Published on

ಬೆಂಗಳೂರು: ರಾಜ್ಯದಲ್ಲಿ ಭಾನುವಾರವೊಂದೇ ದಿನ ಹೊಸದಾಗಿ 3,652 ಕೋವಿಡ್​-19 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಸೋಂಕಿತರ ಒಟ್ಟು ಸಂಖ್ಯೆ 8,27,064ಕ್ಕೆ ತಲುಪಿದೆ.

ಮತ್ತೊಂದೆಡೆ ಗುಣಮುಖರ ಪೈಕಿ ಒಂದೇ ದಿನದಲ್ಲಿ 8,053 ಮಂದಿ ವಿವಿಧ ಆಸ್ಪತ್ರೆ ಹಾಗೂ ಕೋವಿಡ್ ಕೇರ್ ಸೆಂಟರ್​ಗಳಿಂದ ಬಿಡುಗಡೆ ಆಗಿದ್ದು, ಇದುವರೆಗೆ ಗುಣವಾದವರ ಸಂಖ್ಯೆ 7,65,261ಕ್ಕೆ ಏರಿಕೆಯಾಗಿದೆ.

ಅದಾಗ್ಯೂ ರಾಜ್ಯದಲ್ಲಿ 50,592 ಸಕ್ರಿಯ ಪ್ರಕರಣಗಳಿದ್ದು, ಅವರ ಪೈಕಿ ಗಂಭೀರ ರೋಗಲಕ್ಷಣಗಳಿರುವ 935 ಜನರು ತೀವ್ರ ನಿಗಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಒಂದೇ ದಿನದಲ್ಲಿ 24 ಮಂದಿ ಕರೊನಾಗೆ ಬಲಿಯಾಗಿದ್ದು, ಇದುವರೆಗೆ 11,192 ಮಂದಿ ಕರೊನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net