ಕರ್ನಾಟಕದಲ್ಲಿ ಇಂದು 1,185 ಜನರಲ್ಲಿ ಕರೊನಾ ಸೋಂಕು ಪತ್ತೆ; 11 ಮಂದಿ ಸಾವು

Corona
Published on

ಬೆಂಗಳೂರು: ಕರ್ನಾಟಕದಲ್ಲಿ ಮಂಗಳವಾರ 1,185 ಜನರಲ್ಲಿ ಕರೊನಾ ಸೋಂಕು ದೃಢವಾಗಿದೆ. ಈ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 9,03,425ಕ್ಕೆ ಏರಿದೆ. ಒಂದೇ ದಿನ 1,594 ಮಂದಿ ಗುಣಮುಖವಾಗಿದ್ದು, ಗುಣಮುಖರ ಸಂಖ್ಯೆ 8,75,796ಕ್ಕೆ ಹಚ್ಚಳವಾಗಿದೆ. ಕೇವಲ 15,645 ಸಕ್ರಿಯ ಪ್ರಕರಣಗಳು ಬಾಕಿಯುಳಿದಿವೆ.

ಮಂಗಳವಾರ ಒಂದೇ ದಿನದಲ್ಲಿ 11 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಇದುವರೆಗೆ ರಾಜ್ಯದಲ್ಲಿ ಸೋಂಕಿನಿಂದಾಗಿ ಸಾವನ್ನಪ್ಪಿದವರ ಸಂಖ್ಯೆ 11,965ಕ್ಕೆ ಏರಿಕೆಯಾಗಿದೆ. 253 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್​ ಬುಲೆಟಿನ್​ನಲ್ಲಿ ತಿಳಿಸಿದೆ.

ಇಂದು ಬೆಂಗಳೂರಿನಲ್ಲಿ 673 ಹೊಸ ಪ್ರಕರಣ ವರದಿಯಾಗಿದೆ. ಈ ಮೂಲಕ ನಗರದಲ್ಲಿ ವರದಿಯಾದ ಒಟ್ಟು ಪ್ರಕರಣಗಳ ಸಂಖ್ಯೆ 3,79,571ಕ್ಕೆ ಏರಿದೆ. ಇದರಲ್ಲಿ 3,64,787 ಸೋಂಕಿತರು ಚೇತರಿಸಿಕೊಂಡಿದ್ದು, 4,241 ಮಂದಿ ಮೃತರಾಗಿದ್ದಾರೆ. 10,542 ಸಕ್ರಿಯ ಪ್ರಕರಣಗಳು ಬಾಕಿಯಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net