

ಬೆಂಗಳೂರು: ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ 24 ಹೊಸ ಸೋಂಕು ಪ್ರಕರಣಗಳು ದಾಖಲಾಗಿದೆ. ಈ ಮೂಲಕ ಇಲ್ಲಿಯವರೆಗೆ ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 589 ಆಗಿದ್ದು, ಈ ಪೈಕಿ 22 ಮಂದಿ ಮೃತಪಟ್ಟಿದ್ದಾರೆ.
ಇಲ್ಲಿಯವರೆಗೆ 251 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. 315 ಮಂದಿಯ ಪೈಕಿ 306 ಸೋಂಕಿತರು ಪ್ರತ್ಯೇಕ ವಾರ್ಡ್ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, 9 ಮಂದಿಯನ್ನು ಐಸಿಯುನಲ್ಲಿ ಇಡಲಾಗಿದೆ.
ಹೊಸ ಸೋಂಕಿತರ ವಿವರ ಈ ರೀತಿ ಇದೆ:
ಮಂಡ್ಯ- 3; ಮಂಡ್ಯ ಜಿಲ್ಲೆಯ ಕೆ.ಆರ್.ಪೇಟಿ- 1; ಮಂಡ್ಯ ಜಿಲ್ಲೆಯ ಮಳವಳ್ಳಿ-4; ಬೆಳಗಾವಿಯ ರಾಯಭಾಗ-3; ವಿಜಯಪುರ 1; ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ 1; ದಾವಣಗೆರೆ 6; ಚಿಕ್ಕಬಳ್ಳಾಪುರ-1; ಕಲಬುರಗಿ-2; ಧಾರವಾಡ-1.
ಯಾವ ಜಿಲ್ಲೆಗಳಲ್ಲಿ ಎಷ್ಟು ಸೋಂಕಿತರು ಇದ್ದಾರೆ, ಎಷ್ಟು ಮಂದಿ ಬಿಡುಗಡೆ ಹೊಂದಿದ್ದಾರೆ ಎಂಬ ಬಗ್ಗೆ ವಿವರ ಇಲ್ಲಿದೆ: