

ಬೆಂಗಳೂರು: ರಾಜ್ಯದಲ್ಲಿ ಕರೊನಾ ಸೋಂಕಿನ ಅಬ್ಬರ ದಿನದಿಂದ ದಿನಕ್ಕೆ ಇಳಿಕೆ ಕಾಣುತ್ತಿದ್ದು, ಭಾನುವಾರ 1,564 ಮಂದಿಗೆ ಸೋಂಕು ದೃಢವಾಗಿದೆ. ಈ ಮೂಲಕ ಪಾಸಿಟಿವಿಟಿ ಪ್ರಮಾಣವೂ ಶೇ. 1.02ಕ್ಕೆ ಇಳಿಕೆಯಾಗಿದೆ.
ಇಂದು ಒಟ್ಟಾರೆಯಾಗಿ 1,53,083 ಮಂದಿಗೆ ಕರೊನಾ ಪರೀಕ್ಷೆ ಮಾಡಲಾಗಿತ್ತು. ಅದರಲ್ಲಿ 1,564 ಮಂದಿಗೆ ಮಾತ್ರವೇ ಸೋಂಕು ಕಾಣಿಸಿಕೊಂಡಿದೆ. ಒಟ್ಟಾರೆ ಸೋಂಕಿತರ ಸಂಖ್ಯೆ 28,53,643ಕ್ಕೆ ಏರಿಕೆಯಾಗಿದೆ. 24 ಗಂಟೆಗಳಲ್ಲಿ 4,775 ಮಂದಿ ಗುಣಮುಖರಾಗಿದ್ದು, ಒಟ್ಟಾರೆ ಗುಣಮುಖರ ಸಂಖ್ಯೆ 27,73,407ಕ್ಕೆ ಹೆಚ್ಚಳವಾಗಿದೆ. ಸದ್ಯ 44,846 ಸಕ್ರಿಯ ಪ್ರಕರಣಗಳು ಬಾಕಿಯುಳಿದಿವೆ. 59 ಸೋಂಕಿತರು ಸಾವನ್ನಪ್ಪಿದ್ದು, ಒಟ್ಟಾರೆ ಮೃತರ ಸಂಖ್ಯೆ 35,367ಕ್ಕೆ ಏರಿದೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿಂದು 352 ಮಂದಿಗೆ ಸೋಂಕು ದೃಢವಾಗಿದ್ದು, ಮೂವರು ಸಾವನ್ನಪ್ಪಿದ್ದಾರೆ. ಈವರೆಗೆ 15,668 ಮಂದಿ ಬೆಂಗಳೂರಿನಲ್ಲಿ ಸೋಂಕಿಗೆ ಬಲಿಯಾಗಿದ್ದರೆ 18,018 ಸಕ್ರಿಯ ಪ್ರಕರಣಗಳು ಬಾಕಿಯಿವೆ ಎಂದು ಕರ್ನಾಟಕ ವೈದ್ಯಕೀಯ ಇಲಾಖೆ ವರದಿ ನೀಡಿದೆ. (ಏಜೆನ್ಸೀಸ್)