ರಾಜ್ಯದಲ್ಲಿ ಇಂದು 2,162 ಕರೊನಾ ಪ್ರಕರಣ ದೃಢ; 48 ಸೋಂಕಿತರು ಮೃತ

corona1
Published on

ಬೆಂಗಳೂರು: ರಾಜ್ಯದಲ್ಲಿ ಶನಿವಾರದಂದು 2,162 ಜನರಲ್ಲಿ ಕರೊನಾ ಸೋಂಕು ದೃಢವಾಗಿದೆ. ಒಟ್ಟಾರೆ ಸೋಂಕಿತರ ಸಂಖ್ಯೆ 28.69 ಲಕ್ಷಕ್ಕೆ ಏರಿಕೆಯಾಗಿದೆ. 48 ಸೋಂಕಿತರು ಸಾವನ್ನಪ್ಪಿದ್ದು, ಮೃತರ ಸಂಖ್ಯೆ 35,779ಕ್ಕೆ ಹೆಚ್ಚಳವಾಗಿದೆ.

ಇಂದು 2,879 ಸೋಂಕಿತರು ಗುಣಮುಖವಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೆ 27.96 ಲಕ್ಷಕ್ಕೂ ಅಧಿಕ ಸೋಂಕಿತರು ಗುಣಮುಖರಾಗಿದ್ದು, 37,141 ಸಕ್ರಿಯ ಪ್ರಕರಣಗಳು ಬಾಕಿಯುಳಿದಿವೆ. ಕರೊನಾ ಪಾಸಿಟಿವಿಟಿ ಪ್ರಮಾಣ ಶೇ. 1.48ರಷ್ಟಿದ್ದು, ಮರಣ ಪ್ರಮಾಣ ಶೇ. 2.22ರಷ್ಟಿದೆ.

ರಾಜಧಾನಿ ಬೆಂಗಳೂರಿನಲ್ಲಿ ಕಳೆದ 24 ಗಂಟೆಗಳಲ್ಲಿ 452 ಜನರಲ್ಲಿ ಕರೊನಾ ಸೋಂಕು ಕಾಣಿಸಿಕೊಂಡಿದೆ. 5 ಸೋಂಕಿತರು ಸಾವನ್ನಪ್ಪಿದ್ದಾರೆ. ಈ ಮೂಲಕ ನಗರದ ಒಟ್ಟಾರೆ ಸೋಂಕಿತರ ಸಂಖ್ಯೆ 12,18,945ಕ್ಕೆ ಏರಿಕೆಯಾಗಿದ್ದು, ಮೃತರ ಸಂಖ್ಯೆ 15,728ಕ್ಕೆ ಹೆಚ್ಚಳವಾಗಿದೆ. ಇಂದು ನಗರದಲ್ಲಿ 746 ಸೋಂಕಿತರು ಗುಣಮುಖರಾಗಿದ್ದು, 13,237 ಸಕ್ರಿಯ ಪ್ರಕರಣಗಳು ಬಾಕಿಯುಳಿದಿವೆ. (ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net