ಕೋವಿಡ್ ಎರಡನೇ ಅಲೆ: ಗಂಭೀರ ಸಮಸ್ಯೆಗೆ ಒಳಗಾಗುತ್ತಿದ್ದಾರೆ ಸೋಂಕಿತರು

Corona
Published on

ಬೆಂಗಳೂರು: ಕೋವಿಡ್ ಎರಡನೇ ಅಲೆಯಲ್ಲಿ ಸೋಂಕಿಗೆ ಒಳಗಾಗುತ್ತಿರುವ ರೋಗಿಗಳಲ್ಲಿ ಹೆಚ್ಚಿನವರು ಗಂಭೀರ ಸಮಸ್ಯೆಗೆ ಒಳಗಾಗುತ್ತಿದ್ದು, ಇದರಿಂದ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುವವರ ಸಂಖ್ಯೆ 405ಕ್ಕೆ ಏರಿಕೆಯಾಗಿದೆ.

ಬೆಂಗಳೂರಿನಲ್ಲಿ 169, ಕಲಬುರಗಿ 44, ಕೋಲಾರ 33, ಮೈಸೂರು 23, ತುಮಕೂರು 17, ದಕ್ಷಿಣ ಕನ್ನಡ 14, ಮಂಡ್ಯ, ಧಾರವಾಡ, ಬೀದರ್ ತಲಾ 13, ಉಡುಪಿ 10 ಮಂದಿ ಸೇರಿದಂತೆ ರಾಜ್ಯಾದ್ಯಂತ 405 ಮಂದಿ ಗಂಭೀರ ಸಮಸ್ಯೆಯಿಂದಾಗಿ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ರಾಜ್ಯದಲ್ಲಿ ಶನಿವಾರ 36 ಸೋಂಕಿತರು ಸಾವನ್ನಪ್ಪಿದ್ದು, ಮೃತರ ಸಂಖ್ಯೆ 12,849ಕ್ಕೆ ತಲುಪಿದೆ. 6,955 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, ದಿನದ ಸೋಂಕು ಪ್ರಮಾಣ ದರ ಶೇ. 7.04ಕ್ಕೆ ಏರಿಕೆಯಾಗಿದೆ. ಒಟ್ಟು ಸೋಂಕಿತರ ಸಂಖ್ಯೆ 10.55 ಲಕ್ಷ ಮೀರಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 61,653ಕ್ಕೆ ಏರಿಕೆಯಾಗಿದೆ. 3,350 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಗುಣಮುಖರ ಸಂಖ್ಯೆ 9.80 ಲಕ್ಷ ದಾಟಿದೆ.

ಜಿಲ್ಲೆಗಳಲ್ಲಿ ಹೆಚ್ಚಿದ ಸೋಂಕು: ಬೆಂಗಳೂರು ನಗರದಲ್ಲಿ 4,383, ಕಲಬುರಗಿ 276, ಮೈಸೂರು 266, ಬೀದರ್ 215, ತುಮಕೂರು 206, ದಕ್ಷಿಣ ಕನ್ನಡ 137, ಬೆಂಗಳೂರು ಗ್ರಾಮಾಂತರ 152, ಕೋಲಾರ 121, ಮಂಡ್ಯ 119, ಹಾಸನ 100 ಸೇರಿದಂತೆ ಹತ್ತು ಜಿಲ್ಲೆಗಳಲ್ಲಿ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ.

56.26 ಲಕ್ಷ ಡೋಸ್ ಲಸಿಕೆ ವಿತರಣೆ: ರಾಜ್ಯದಲ್ಲಿ ಶನಿವಾರ ಒಂದೇ ದಿನ 4,915 ಕೇಂದ್ರಗಳಲ್ಲಿ ಕೋವಿಡ್ ಲಸಿಕೆ ಅಭಿಯಾನ ನಡೆದಿದ್ದು, 1.17 ಲಕ್ಷ ಮಂದಿಗೆ ಲಸಿಕೆ ನೀಡಲಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಈವರೆಗೂ 56.26 ಲಕ್ಷ ಡೋಸ್ ಲಸಿಕೆ ವಿತರಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net