ಕರ್ನಾಟಕ ಚುನಾವಣಾ ಫಲಿತಾಂಶ: ರಾಜ್ಯಾದ್ಯಂತ ಮತಎಣಿಕೆಗೆ ಸಿದ್ಧತೆ ಆರಂಭ, ಎಲ್ಲೆಲ್ಲಿ ನಡೆಯಲಿದೆ ಎಣಿಕೆ?

Vote Counting
Published on

ಬೆಂಗಳೂರು: ಕರ್ನಾಟಕದ 16ನೇ ವಿಧಾನಸಭೆಗೆ ಮೇ 10ರಂದು ಮತದಾನ ನಡೆದಿದ್ದು, ಇಂದು ಬೆಳಗ್ಗೆ 8 ಗಂಟೆಯಿಂದ ಮತಎಣಿಕೆ ಆರಂಭವಾಗಲಿದೆ. ಈಗಾಗಲೇ ರಾಜ್ಯಾದ್ಯಂತ ಮತಎಣಿಕೆಗೆ ಸಲಕ ಸಿದ್ಧತೆ ಆರಂಭವಾಗಿದೆ.

ಇಂದು ಮಧ್ಯಾಹ್ನದ ಹೊತ್ತಿಗೆ ಫಲಿತಾಂಶದ ಸ್ಪಷ್ಟ ಚಿತ್ರಣ ಹೊರಬೀಳಲಿದ್ದು, ಯಾರು ಈ ಬಾರಿಯ ಅಧಿಕಾರದ ಗದ್ದುಗೆ ಏರಲಿದ್ದಾರೆ ಎಂಬ ಕುತೂಹಲಕ್ಕೆ ತೆರೆಬೀಳಲಿದೆ. ಕರ್ನಾಟಕವು ಒಟ್ಟು 224 ವಿಧಾನಸಭಾ ಸ್ಥಾನಗಳನ್ನು ಹೊಂದಿದ್ದು, ಯಾವುದೇ ಪಕ್ಷ ಅಧಿಕಾರ ರಚನೆ ಮಾಡಲು 113 ಸ್ಥಾನಗಳನ್ನು ಗೆಲ್ಲಬೇಕಿದೆ. ಒಂದು ವೇಳೆ ಯಾರಿಗೂ ಬಹುಮತ ಬರದಿದ್ದರೆ ಮತ್ತೆ ಅತಂತ್ರ ಸರ್ಕಾರ ರಚನೆಯಾಗಲಿದೆ.

ಎಲ್ಲೆಲ್ಲಿ ಮತ ಎಣಿಕೆ?

ರಾಣಿ ಪಾರ್ವತಿ ದೇವಿ ಕಾಲೇಜು ಬೆಳಗಾವಿ, ತೋಟಗಾರಿಕೆ ವಿಶ್ವವಿದ್ಯಾಲಯ, ಬಾಗಲಕೋಟೆ, ಸೈನಿಕ ಶಾಲೆ, ವಿಜಯಪುರ, ಸರ್ಕಾರಿ ಪಿಯು ಕಾಲೇಜು ಯಾದಗಿರಿ, ಕಲಬುರಗಿ ವಿಶ್ವವಿದ್ಯಾಲಯ, ಕಲಬುರಗಿ, ಬಿ.ವಿ.ಬಿ. ಕಾಲೇಜು ಬೀದರ್, ಎಸ್​ಆರ್​ಪಿಎಸ್ ಪಿಯು ಕಾಲೇಜು ರಾಯಚೂರು, ಶ್ರೀ ಗವಿಸಿದ್ದೇಶ್ವರ ಕಾಲೇಜು ಕೊಪ್ಪಳ, ಶ್ರೀ ಜಗದದ್ಗುರು ತೋಂಟದಾರ್ಯ ಕಲೆ, ವಿಜ್ಞಾನ, ವಾಣಿಜ್ಯ ಕಾಲೇಜು ಗದಗ, ಕೃಷಿ ವಿಶ್ವವಿದ್ಯಾಲಯ ಧಾರವಾಡ, ಡಾ.ಎ.ವಿ. ಬಾಳಿಗ ಕಲೆ, ವಿಜ್ಞಾನ ಕಾಲೇಜು ಕುಮಟಾ(ಉತ್ತರ ಕನ್ನಡ), ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಹಾವೇರಿ, ಪ್ರೌಢ ದೇವರಾಯ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಹೊಸಪೇಟೆ(ವಿಜಯನಗರ ಜಿಲ್ಲೆ), ರಾವ್ ಬಹುದ್ದೂರ್ ವೈ. ಮಹಾಬಲೇಶ್ವರಪ್ಪ ಎಂಜಿನಿಯರಿಂಗ್ ಕಾಲೇಜು ಬಳ್ಳಾರಿ, ಸರ್ಕಾರಿ ವಿಜ್ಞಾನ ಕಾಲೇಜು ಚಿತ್ರದುರ್ಗ, ಶಿವಗಂಗೋತ್ರಿ ವಿಶ್ವವಿದ್ಯಾಲಯ ದಾವಣಗೆರೆ, ಸಹ್ಯಾದ್ರಿ ಕಲಾ ಕಾಲೇಜು ಶಿವಮೊಗ್ಗ, ಸೇಂಟ್ ಸೆಸಿಲೀಸ್ ಗ್ರೂಪ್ ಆಫ್ ಇನ್​ಸ್ಟಿಟ್ಯೂಟ್ಸ್ ಉಡುಪಿ, ಐಡಿಎಸ್​ಜಿ ಸರ್ಕಾರಿ ಕಾಲೇಜು ಚಿಕ್ಕಮಗಳೂರು, ತುಮಕೂರು ವಿಶ್ವವಿದ್ಯಾಲಯ ತುಮಕೂರು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಚಿಕ್ಕಬಳ್ಳಾಪುರ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕೋಲಾರ, ಬಿಎಂಎಸ್ ಮಹಿಳಾ ಕಾಲೇಜು ಬಸವನಗುಡಿ (ಬೆಂಗಳೂರು ಕೇಂದ್ರ), ಮೌಂಟ್ ಕಾರ್ವೆಲ್ ಪಿಯು ಕಾಲೇಜು(ಬಿಬಿಎಂಪಿ ಉತ್ತರ), ಎಸ್​ಎಸ್​ಎಂಆರ್​ವಿ ಪಿಯು ಕಾಲೇಜು ಜಯನಗರ (ಬೆಂಗಳೂರು ದಕ್ಷಿಣ), ಸೇಂಟ್ ಜೋಸೆಫ್ ಇಂಡಿಯನ್ ಹೈಸ್ಕೂಲ್ ಮತ್ತು ಕಾಂಪೋಜಿಟ್ ಪಿಯು ಕಾಲೇಜು(ಬೆಂಗಳೂರು ನಗರ), ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ರಾಮನಗರ, ಮಂಡ್ಯ ವಿಶ್ವವಿದ್ಯಾಲಯ ಮಂಡ್ಯ, ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಹಾಸನ, ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಸೂರತ್ಕಲ್(ದಕ್ಷಿಣ ಕನ್ನಡ), ಸೇಂಟ್ ಜೋಸೆಫ್ ಕಾನ್ವೆಂಟ್ ಕೊಡಗು, ಸರ್ಕಾರಿ ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ಮ್ಯಾನೇಜ್​ವೆುಂಟ್ ಕಾಲೇಜು ಮೈಸೂರು ಮತ್ತು ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಚಾಮರಾಜನಗರ ಗಳಲ್ಲಿ ಮತ ಎಣಿಕೆ ನಡೆಯಲಿದೆ.

36 ಎಣಿಕೆ ಕೇಂದ್ರ

ಬೆಂಗಳೂರಿನ ನಾಲ್ಕು ಕೇಂದ್ರಗಳು ಸೇರಿ ರಾಜ್ಯದಲ್ಲಿ ಒಟ್ಟು 36 ಕಡೆಗಳಲ್ಲಿ ಮತ ಎಣಿಕೆ ನಡೆಯಲಿದೆ. 306 ಹಾಲ್ ಹಾಗೂ 4,256 ಟೇಬಲ್​ಗಳನ್ನು ಅಳವಡಿಸಲಾಗಿದೆ. ಈ ಕೇಂದ್ರಗಳಿಗೆ ಒಟ್ಟಾರೆ 224 ಆರ್​ಒಗಳು, 317 ಎಆರ್​ಒಗಳು, 4,256 ಸೂಪರ್ ವೈಸರ್ಸ್, 5,256 ಕೌಂಟಿಂಗ್ ಅಸಿಸ್ಟೆಂಟ್ಸ್, 4,256 ಸೂಕ್ಷ್ಮ ವೀಕ್ಷಕರು, 450 ಹೆಚ್ಚುವರಿ ಎಆರ್​ಒಗಳನ್ನು ನಿಯುಕ್ತಿ ಮಾಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net