ರಾಜ್ಯದ ಮಾಜಿ ಮುಖ್ಯ ಕಾರ್ಯದರ್ಶಿ ಬಿ.ಕೆ ಭಟ್ಟಾಚಾರ್ಯ ನಿಧನ

b.k.battacharya 11
Published on

ಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯ ಕಾರ್ಯದರ್ಶಿ ಬಿ.ಕೆ. ಭಟ್ಟಾಚಾರ್ಯ (83) ಶನಿವಾರ ನಿಧನರಾಗಿದ್ದಾರೆ. ಇವರು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ.

ನಿವೃತ್ತ ಐಎಎಸ್ ಅಧಿಕಾರಿಯಾಗಿದ್ದ ಅವರಿಗೆ ಎರಡು ದಿನಗಳ ಹಿಂದೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಶುಕ್ರವಾರ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಇವರು ಈ ಹಿಂದೆ ಸಿದ್ದರಾಮಯ್ಯ ಅವರು ಹಣಕಾಸು ಸಚಿವರಾಗಿದ್ದಾಗ ಅವರೊಂದಿಗೆ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು.

ಪತ್ನಿ ತೆರೆಸಾ ಭಟ್ಟಾಚಾರ್ಯ ಮತ್ತು ಇಬ್ಬರು ಮಕ್ಕಳು ಇದ್ದಾರೆ. ಡಿಸೆಂಬರ್ 5, 1940 ರಂದು ಜನಿಸಿದ ಬಿ.ಕೆ. ಭಟ್ಟಾಚಾರ್ಯ ಅವರು 2000ನೇ ಇಸ್ವಿಯ ಡಿಸೆಂಬರ್ 30ರಂದು ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ನಿವೃತ್ತರಾಗಿದ್ದರು.

ಭಟ್ಟಾಚಾರ್ಯ ಅವರ ನಿಧನಕ್ಕೆ ಐಎಎಸ್ ಅಧಿಕಾರಿಗಳ ಸಂಘದ ಸದಸ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ಅವರೂ ಸಂತಾಪ ವ್ಯಕ್ತಪಡಿಸಿದ್ದಾರೆ.‌

ಪ್ರಾಮಾಣಿಕ ಅಧಿಕಾರಿ: ಬಿ.ಕೆ. ಭಟ್ಟಾಚಾರ್ಯ ನಿಧನರಾಗಿರುವುದು ನನಗೆ ದುಃಖವಾಗಿದೆ. ಪ್ರಾಮಾಣಿಕ ಅಧಿಕಾರಿಯಾಗಿದ್ದ ಅವರೊಂದಿಗೆ ಕೆಲಸ ಮಾಡುವುದನ್ನು ಬಹಳ ಇಷ್ಟಪಟ್ಟಿದ್ದೆ. ಅವರ ಕುಟುಂಬಕ್ಕೆ ನನ್ನ ಸಂತಾಪಗಳು ಎಂದು ಸಿಎಂ ಸಿದ್ದರಾಮಯ್ಯ ಅವರು ಬರೆದುಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net