

ಬೆಂಗಳೂರು: ರಾಜ್ಯದಲ್ಲಿ ಒಟ್ಟು ಐದು ಸಾವಿರ ಕೋಟಿ ರೂ. ಬಂಡವಾಳ ಹೂಡಿಕೆಯ ಎರಡು ಪ್ರಮುಖ ಯೋಜನೆಗಳ ಸಂಬಂಧ ರಾಜ್ಯ ಸರ್ಕಾರದೊಂದಿಗೆ ಫಾಕ್ಸ್‌ಕಾನ್ ಒಪ್ಪಂದ ಮಾಡಿಕೊಂಡು, ಬುಧವಾರ ಸಹಿತ ಹಾಕಿದೆ. ಈ ಯೋಜನೆಗಳ ಅನುಷ್ಠಾನದಿಂದ 13 ಸಾವಿರ ಉದ್ಯೋಗಗಳು ಸೃಷ್ಟಿಯಾಗುವ ಅಂದಾಜಿದೆ.
ಎರಡೂ ಒಪ್ಪಂದಗಳು, ಈ ಮೊದಲು ಮಾಡಿಕೊಂಡಿದ್ದ 14 ಸಾವಿರ ಕೋಟಿ ರೂ ಮೊತ್ತದ ಆ್ಯಪಲ್ ಫಾಕ್ಸ್‌ಕಾನ್ ತಯಾರಿಕಾ ಘಟಕ ಹೊರತಾದವು. ಒಪ್ಪಂದಕ್ಕೆ ಅಂಕಿತ ಹಾಕಿದ ಎರಡು ಯೋಜನೆಗಳಿಗೆ ದೊಡ್ಡಬಳ್ಳಾಪುರ ಸಮೀಪ ಭೂಮಿ ನೀಡುವ ಕೆಲಸ ನಡೆಯುತ್ತಿದೆ ಎಂದು ಬೃಹತ್ ಮತ್ತು ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.
ಫಾಕ್ಸ್‌ಕಾನ್ ಮತ್ತು ರಾಜ್ಯ ಸರ್ಕಾರ ನಡುವಿನ ಈ ಒಪ್ಪಂದವು ತಂತ್ರಜ್ಞಾನದ ಪ್ರಗತಿ, ಒಟ್ಟಾರೆ ಸಾಮಾಜಿಕ- ಆರ್ಥಿಕ ಬೆಳವಣಿಗೆಯಲ್ಲಿ ಗಮನಾರ್ಹ ಬದಲಾವಣೆ ತರಲಿದೆ. ಸಾವಿರಾರು ನುರಿತ ಕೆಲಸಗಾರರಿಗೆ ಕೆಲಸ, ರಾಜ್ಯಕ್ಕೆ ಬಂಡವಾಳ ತರಲಿದೆ ಎಂದಿದ್ದಾರೆ.
‘ಕರ್ನಾಟಕ ಸರ್ಕಾರದ ಜತೆ ಯೋಜಿತ ಹೂಡಿಕೆ ಒಪ್ಪಂದ ಮಾಡಿಕೊಳ್ಳಲಾಗಿದ್ದು, ನಮ್ಮ ಹೈಟೆಕ್ ಉದ್ಯಮಗಳಿಗೆ ರಾಜ್ಯ ಆಕರ್ಷಕ ತಾಣವಾಗಿದೆ. ಉದ್ಯಮಕ್ಕೆ ಪೂರಕವಾದ ವಾತಾವರಣವಿದೆ, ನುರಿತ ಕೆಲಸಗಾರರ ಲಭ್ಯತೆ ಇಲ್ಲಿನ ವಿಶೇಷ. ಈ ಎರಡು ಪ್ರಮುಖ ಯೋಜನೆಗಳ ಮೂಲಕ ರಾಜ್ಯದಲ್ಲಿ ಹೊಸ ಅಧ್ಯಾಯ ಪ್ರಾರಂಭಿಸಲಿದ್ದೇವೆ ಎಂದು ಫಾಕ್ಸ್‌ಕಾನ್ ಅಧ್ಯಕ್ಷ ಯಂಗ್ ಲಿಯು ಹೇಳಿದ್ದಾರೆ.
ಒಪ್ಪಂದ ಪತ್ರಕ್ಕೆ ಚೆನ್ನೈನಲ್ಲಿ ಫಾಕ್ಸ್‌ಕಾನ್ ಬುಧವಾರ ಅಂಕಿತ ಹಾಕಿದೆ. ಈ ಸಂದರ್ಭದಲ್ಲಿ ಎಂ.ಬಿ.ಪಾಟೀಲ್ ಜತೆಗೆ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ.ರಮಣರೆಡ್ಡಿ, ಕೈಗಾರಿಕಾ ಅಭಿವೃದ್ಧಿ ಆಯುಕ್ತೆ ಗುಂಜನ್ ಕೃಷ್ಣ ಇದ್ದರು.
ಫಾಕ್ಸ್‌ಕಾನ್ ಎನ್‌ಕ್ಲೋಸರ್ ಎಫ್‌ಐಐ: ಐಫೋನ್ಗಳ ಮೆಕಾನಿಕಲ್ ಎನ್‌ಕ್ಲೋಸರ್‌ನಂತಹ ಸ್ಮಾರ್ಟ್‌ೆನ್‌ನ ಉಪಘಟಕಗಳನ್ನು ಫಾಕ್ಸ್‌ಕಾನ್ ಸಂಸ್ಥೆ ತಯಾರಿಸುತ್ತದೆ. ಫಾಕ್ಸ್‌ಕಾನ್ ಇಂಡಸ್ಟ್ರೀಯಲ್ ಇಂಟರ್‌ನೆಟ್ ಹೂಡಿಕೆ ಮೊತ್ತ 350 ದಶಲಕ್ಷ ಡಾಲರ್ (3,000 ಕೋಟಿ ರೂ.). ಯೋಜನೆಯಡಿ 12 ಸಾವಿರ ಜನರಿಗೆ ಉದ್ಯೋಗ ದೊರೆಯಲಿದೆ. ಬೆಂಗಳೂರಿನ ಸುತ್ತಮುತ್ತಲಿನ ಪ್ರದೇಶದಲ್ಲಿ ಘಟಕ ಸ್ಥಾಪಿಸಲು ಎ್ಐಐ ಬಯಸಿದೆ.
ಸೆಮಿಕಾನ್ ಉಪಕರಣಗಳು: ಅಪ್ಲೈಡ್ ಮೆಟೀರಿಯಲ್ಸ್ ಸಹಯೋಗದಲ್ಲಿ ಸೆಮಿಕಂಡಕ್ಟರ್ ಉತ್ಪಾದನಾ ಉಪರಕಣಗಳ ತಯಾರಿಸುವ ಸಂಸ್ಥೆ. ಯೋಜನೆ ಹೂಡಿಕೆ ಮೊತ್ತ 250 ದಶಲಕ್ಷ ಡಾಲರ್ (2,000 ಕೋಟಿ ರೂ.). ಇದರಿಂದ ಒಂದು ಸಾವಿರ ಜನರಿಗೆ ಉದ್ಯೋಗ ಲಭಿಸಲಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿರುವ ಏರೋಸ್ಪೇಸ್ ಮತ್ತು ಡಿೆನ್ಸ್ ಪಾರ್ಕ್ ಎರಡನೇ ಹಂತದಲ್ಲಿ ಈ ಯೋಜನೆಗಾಗಿ 35 ಎಕರೆ ಜಮೀನು ಅಂತಿಮಗೊಳಿಸಲಾಗಿದೆ.