ಕರ್ನಾಟಕದಿಂದ 4 ಕುಮ್ಕಿ ಆನೆಗಳನ್ನು ಆಂಧ್ರಪ್ರದೇಶಕ್ಕೆ ಹಸ್ತಾಂತರಿಸಿದ ಸಿಎಂ ಸಿದ್ದರಾಮಯ್ಯ..elephants

elephant
Published on

ಬೆಂಗಳೂರು:  ( elephants) ಕರ್ನಾಟಕದಿಂದ ಆಂಧ್ರಪ್ರದೇಶಕ್ಕೆ ನಾಲ್ಕು ಕುಮ್ಕಿ ಆನೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು  ಹಸ್ತಾಂತರಿಸಿದ್ದಾರೆ.

ವಿಧಾನಸೌಧದ ಮುಂಭಾಗದ ಮೆಟ್ಟಿಲುಗಳ ಮೇಲೆ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಆಂಧ್ರ ಪ್ರದೇಶದ ಉಪ ಮುಖ್ಯಮಂತ್ರಿ ಹಾಗೂ ಅರಣ್ಯ ಸಚಿವ ಪವನ್ ಕಲ್ಯಾಣ್ ಅವರಿಗೆ ಆನೆಗಳನ್ನು ಹಸ್ತಾಂತರ ಮಾಡಿದರು.

ವಿಧಾನಸೌಧ ಮುಂಭಾಗ ಜ್ಯೂನಿಯರ್ ಅಭಿಮನ್ಯು, ರಂಜನ್, ಕೃಷ್ಣ, ದೇವ ಆನೆಗಳಿಗೆ ಪೂಜೆ ನೆರವೇರಿಸಲಾಯಿತು. ಯುದ್ಧಕ್ಕೆ ಹೋಗೋ ಸೈನಿಕರಂತೆ ರಾಜ್ಯ ಸರ್ಕಾರ ಆಂಧ್ರಪ್ರದೇಶಕ್ಕೆ ಈ 4 ಕುುಮ್ಕಿ ಆನೆಗಳನ್ನ ಹಸ್ತಾಂತರ ಮಾಡಿದೆ. ಮಹೇಂದ್ರ ಆನೆ ಕುಮ್ಕಿ ಆನೆಗಳ ಬೆಂಬಲಕ್ಕೆ ಬಂದಿದ್ದು, ಆಂಧ್ರಪ್ರದೇಶಕ್ಕೆ ಕಳಿಸಿದ ಬಳಿಕ ವಾಪಸ್ ಆಗಲಿದೆ.

ಪ್ರಸ್ತುತ ಆಂಧ್ರಪ್ರದೇಶಕ್ಕೆ ರಾಜ್ಯ ಸರ್ಕಾರ ನಾಲ್ಕು ಆನೆಗಳನ್ನು ಹಸ್ತಾಂತರಿಸಿದ್ದು, ಮುಂದಿನ ದಿನಗಳಲ್ಲಿ ಮತ್ತೆರಡು ಆನೆಗಳನ್ನು ಹಸ್ತಾಂತರಿಸಲಿದೆ ಎಂದು ತಿಳಿದುಬಂದಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ದೇಶದಲ್ಲೇ ಆನೆ ಸಂಪತ್ತು ಹೆಚ್ಚಾಗಿರುವ ರಾಜ್ಯ ನಮ್ಮದು. 3,695 ಆನೆಗಳು ನಮ್ಮಲ್ಲಿವೆ. ಮಾನವ - ಆನೆ ಸಂಘರ್ಷ ತಡೆಗಟ್ಟಲು ಅಕ್ಕಪಕ್ಕದ ರಾಜ್ಯಗಳ ಸಹಕಾರವೂ ಅಗತ್ಯ. ಮಾನವ, ಆನೆ ಸಂಘರ್ಷ ತಡೆಯುವುದರಿಂದ ಜೀವ ಹಾನಿ, ಬೆಳೆ ಹಾನಿ ತಪ್ಪುತ್ತದೆ. ಈ ಮಹತ್ವದ ಉದ್ದೇಶದಿಂದಲೇ ರಾಜ್ಯದಿಂದ ಆರು ಕುಮ್ಕಿ ಆನೆಗಳನ್ನು ಆಂಧ್ರಕ್ಕೆ ಹಸ್ತಾಂತರಿಸಲಾಗುತ್ತಿದೆ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net