

ಬೆಂಗಳೂರು: ನೆರೆಯ ರಾಜ್ಯವಾಗಿರುವ ಕೇರಳ ರಾಜ್ಯದಲ್ಲಿ ಕರೊನಾ ಸೋಂಕು ತಾಂಡವವಾಡುತ್ತಿದೆ. ಕರೊನಾ ವೈರಸ್ನ ಜೆಎನ್1 ರೂಪಾಂತರಿಯಿಂದಾಗಿ ಕೋವಿಡ್-19 ಸೋಂಕು ಹರಡುವಿಕೆ ತೀವ್ರಗೊಳ್ಳುವ ಸಾಧ್ಯತೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇಂದು ಮಾರ್ಗ ಸೂಚಿಯನ್ನು ಬಿಡುಗಡೆ ಗೊಳಿಸಿದೆ.
ಪ್ರಸ್ತುತ ದೇಶದ ಕೋವಿ 195 ಅಂಕಿ-ಅಂಶಗಳು, ಕೇರಳ ರಾಜ್ಯದಲ್ಲಿ ಕೋವಿಡ್ 19 ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳ, ತಮಿಳುನಾಡು ಹಾಗೂ ಕೇರಳ ರಾಜ್ಯದಲ್ಲಿ ಕೋವಿಡ್ 19 ನ ಉಪತಳಿ IN1 ವರದಿಯಾಗಿರುವುದು, ಚಳಿಗಾಲದ ಹವಾಮಾನ, ಕ್ರಿಸ್ ಮಸ್ ಹಾಗೂ ಹೊಸವರ್ಷಾಚರಣೆಯ ಸಂದರ್ಭದಲ್ಲಿ ಹೆಚ್ಚಾಗುವ ಸಂಭವನೀಯ ಜನದನ ಈ ಎಲ್ಲಾ ಅಂಶಗಳನ್ನು ಗಮನದಲ್ಲಿರಿಸಿಕೊಂಡು, ಕೋವಿಡ್ 19 ರಾಜ ತಾಂತ್ರಿಕ ಸಲಹಾ ಸಮಿತಿಯು ಶಿಫಾರಸ್ಸು ಮಾಡಿರುವ ಈ ಕಳಗಿನ ಅಂಶಗಳನ್ನು ಸಾರ್ವಜನಿಕರು ಪಾಲಿಸುವಂತೆ ಸಲಹೆ ನೀಡಲಾಗಿದೆ.
1. ಎಲ್ಲಾ ಹಿರಿಯ ನಾಗರೀಕರು (60 ವರ್ಷ ಹಾಗೂ ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು. ವಿಶೇಷವಾಗಿ ಕಿರಿ, ಹೃದಯ, ಲಿವರ್ ಸಮಸ್ಯೆಗಳು, ಗರ್ಭಿಣಿಯರು, ಎದೆ ಹಾಲುಣಿಸುವ ತಾಯಂದಿರು, ಹೊರಾಂಗಣ ಪ್ರದೇಶಗಳಿಗೆ ತೆರಳಿದಾಗ ಮಾಸ್ಕ್ ಧರಿಸಬೇಕು, ಅಗತ್ಯ ಗಾಳಿ-ಬೆಳಕಿನ ವ್ಯವಸ್ಥೆಯಿಲ್ಲದ ಮತ್ತು ಹಚ್ಚು ಜನಸಂದಣಿಯಿರುವ ಪ್ರದೇಶಗಳಿಗೆ ತೆರಳದಿರುವುದು ಸೂಕ್ತವಾಗಿದೆ.
2. ಜ್ವರ, ಕೆಮ್ಮು, ನೆಗಡಿ ಇತ್ಯಾದಿ ಉಸಿರಾಟದ ಸೋಂಕಿನ ಲಕ್ಷಣಗಳನ್ನು ಹೊಂದಿದವರು ತಕ್ಷಣವೇ ಅಗತ್ಯ ವೈದ್ಯಕೀಯ ಸಲಹೆಯನ್ನು ಪಡೆಯಬೇಕು. ಮೂಗು ಹಾಗೂ ಬಾಯಿ ಮುಚ್ಚುವಂತೆ ಮಾಸ್ ಧರಿಸುವುದು, ಅಗತ್ಯ ಗಾಳಿ-ಬೆಳಕಿನ ವ್ಯವಸ್ತೆಯಿಲ್ಲದ ಮತ್ತು ಹೆಚ್ಚು ಜನಸಂದಣಿಯಿರುವ ಪ್ರದೇಶಗಳಿಗೆ ಭೇಟಿ ನೀಡದಿರುವುದು ಸೂಕ್ತವಾಗಿದೆ.
3. ಉತ್ತಮ ವ್ಯಯಕ್ತಿಕ ಸ್ವಚ್ಛತೆ, ಆಗಾಗ್ಗೆ ಕ್ರಗಳನ್ನು ಸೋಪು ಹಾಗೂ ನೀರಿನಿಂದ ತೊಳೆದುಕೊಳ್ಳುವುದು, ಇತ್ಯಾದಿಗಳ ಪಾಲನೆಯು ಅಗತ್ಯವಾಗಿದೆ.
4. ಸಮಸ್ಯೆಗಳು ಕಂಡುಬಂದಲ್ಲಿ, ಮನೆಯಲ್ಲಿರುವುದು ಸೂಕ್ತ. ಇತರ ವ್ಯಕ್ತಿಗಳೊಂದಿಗೆ, ವಿಶೇಷವಾಗಿ ನಾಗರಿಕರು / ದುರ್ಬಲರನ್ನು (vulnerable) ಅವಶ್ಯವಿದ್ದಲ್ಲಿ ಮಾತ್ರವೇ ಭೇಟಿ ಮಾಡುವುದು. ಆರೋಗ್ಯ ಸಮಸ್ಯೆಗಳನ್ನು ಹೊಂದಿದವರು, ಜನಸಂದಣಿಯ ಪ್ರದೇಶಗಳಿಗೆ ಭೇಟಿ ನೀಡಬೇಕಾದ ಸಂದರ್ಭದಲ್ಲಿ ಧರಿಸುವಂತೆ ಸಲಹೆ ನೀಡಲಾಗಿದೆ.
5. ಅಂತರ ರಾಷ್ಟ್ರೀಯ ಪ್ರಯಾಣದ ಸಂದರ್ಭದಲ್ಲಿ ಎಚ್ಚರಿಕೆಯಿಂದಿದ್ದು, ವಿಮಾನ ನಿಲ್ದಾಣದಲ್ಲಿ ಹಾಗೂ ವಿಮಾನದ ಒಳಗೆ ಮಾಸ್ ಧರಿಸುವುದು ಹೆಚ್ಚಿನ ಗಾಳಿ-ಬೆಳಕು ಇಲ್ಲವ ಮತ್ತು ಜನದಟ್ಟಣೆ ಇರುವ ಸ್ಥಳಗಳಿಗೆ ತೆರಳದಿರುವುದೂ ಸೇರಿದಂತೆ ಇತರ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಪಾಲಿಸುವುದು ಸೂಕ್ತವಾಗಿದೆ.