ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ರಾಜ್ಯಪಾಲ ಗೆಹ್ಲೋಟ್; ಪ್ರಾರ್ಥಿಸಿದ್ದು ಏನು?

image-600x400 (2)
Published on

ಬೆಂಗಳೂರು: ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಬುಧವಾರ ತಿರುಪತಿ ತಿಮ್ಮಪ್ಪನ‌ ದರುಷನ ಪಡೆದರು.

ಮಂಗಳವಾರ ರಾತ್ರಿ ಬೆಂಗಳೂರಿನಿಂದ ರಸ್ತೆ ಮಾರ್ಗವಾಗಿ ತಿರುಮಲ ಬೆಟ್ಟಕ್ಕೆ ಆಗಮಿಸಿದ್ದ ಅವರು ಬೆಳಿಗ್ಗೆ ದೇವಾಲಯಕ್ಕೆ ಭೇಟಿ ನೀಡಿದರು.

ನಾಡಿನ ಜನತೆಗೆ ಒಳಿತಾಗಲೆಂದು, ನಾಡಿನಲ್ಲಿ ಸುಖಶಾಂತಿ ನೆಲೆಸಲಿ, ಮಳೆ ಸುರಿದು ಸುಭಿಕ್ಷೆ ಉಂಟಾಗಲೆಂದು ಅವರು ವೆಂಕಟೇಶ್ವರನಿಗೆ ಪ್ರಾರ್ಥನೆ ಸಲ್ಲಿಸಿದರು ಎಂದು ರಾಜಭವನದ ಅಧಿಕಾರಿಗಳು ತಿಳಿಸಿದ್ದಾರೆ.

ತಿರುಮಲ ತಿರುಪತಿ ದೇವಸ್ಥಾನ ಮಂಡಳಿ (ಟಿಟಿಡಿ) ಅಧಿಕಾರಿಗಳು ಮತ್ತು ಅರ್ಚಕರು ರಾಜ್ಯಪಾಲರನ್ನು ಸ್ವಾಗತಿಸಿದರು. ಪೂಜೆಯ ನಂತರ ರಂಗಾನಾಯಕುಲ ಮಂಟಪದಲ್ಲಿ ಶ್ರೀವಾರಿ ವಸ್ತ್ರವನ್ನು ನೀಡಿ ಗೌರವಿಸಿದರು. ನಂತರ ತಿಮ್ಮಪ್ಪ ಸ್ವಾಮಿ ಪ್ರಸಾದವನ್ನು ರಾಜ್ಯಪಾಲರಿಗೆ ದೇವಾಲಯದ ವತಿಯಿಂದ ನೀಡಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net