ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಜನವೋ ಜನ; ಸರ್ವರ್ ಡೌನ್ ಹಿನ್ನೆಲೆ ಮೊಬೈಲ್​​​​ನಲ್ಲಿಯೇ ನೋಂದಣಿ ಮಾಡುತ್ತಿರುವ ಸಿಬ್ಬಂದಿ

Gruhalakshmi
Published on

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷೆಯ ಐದು ಗ್ಯಾರಂಟಿಗಳಲ್ಲಿ ಪ್ರಮುಖವಾದ ‘ಗೃಹಲಕ್ಷ್ಮಿ’ ಯೋಜನೆ ಜಾರಿಯಾಗಿದೆ. ಮನೆ ಯಜಮಾನಿಗೆ ಮಾಸಿಕ 2000 ನೀಡುವ ಈ ‘ಗೃಹಲಕ್ಷ್ಮಿ’ ಯೋಜನೆಗೆ ಆನ್​ಲೈನ್​ ಮೂಲಕ ಈಗಾಗಲೇ ನೋಂದಣಿ ಪ್ರಕ್ರಿಯೆ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ರಾಜಾಜಿನಗರ ಬೆಂಗಳೂರು ಒನ್ ಸೆಂಟರ್ ಬಳಿ ಜನರ ದಂಡು ಸೇರಿದೆ.

ಬೆಳಗ್ಗೆಯಿಂದ ಜನ ಕ್ಯೂನಲ್ಲಿ ನಿಂತಿದ್ದು, ಟೋಕನ್ ಪಡೆಯಲು ನೂಕುನುಗ್ಗಲು ಉಂಟಾಗಿದೆ. ಜತೆಗೆ ಶೌಚಾಲಯ ವ್ಯವಸ್ಥೆ ಇಲ್ಲದಿರುವುದಕ್ಕೆ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೆಚ್ಚು ಕಡಿಮೆ ಬೆಳಗ್ಗೆ ನಾಲ್ಕು ಗಂಟೆಯಿಂದ ಮಹಿಳೆಯರು ಕ್ಯೂನಲ್ಲಿ ನಿಂತಿದ್ದು, "ನಾವು ಕೆಲಸ ಬಿಟ್ಟು ಇಲ್ಲೇ ನಿಲ್ಲಬೇಕಾ..?" ಎಂದು ಪ್ರಶ್ನಿಸುತ್ತಿದ್ದಾರೆ.

ಅಷ್ಟೇ ಅಲ್ಲ, ಸೇವಾಸಿಂಧು ಪೋರ್ಟಲ್​​ನಲ್ಲಿ ಗೃಹಲಕ್ಷ್ಮಿ ಅರ್ಜಿ ನೋಂದಣಿ ಮಾಡಿಕೊಳ್ಳಲು ಸರ್ವರ್ ಡೌನ್ ಆಗಿರುವುರಿಂದ ಅರ್ಜಿ ನೋಂದಣಿಯಾಗುತ್ತಿಲ್ಲ. ಇದರಿಂದ ಸಿಬ್ಬಂದಿಗಳು ಮೊಬೈಲ್​​​​ನಲ್ಲಿಯೇ ಅರ್ಜಿ ನೋಂದಣಿ ಮಾಡುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net