ಐದು ರಾಜ್ಯಗಳ ಜನರಿಗೆ ಕರ್ನಾಟಕ ಪ್ರವೇಶ ‘ನಿಷೇಧ’ ಮಾಡಿಲ್ಲ: ಮಾಧುಸ್ವಾಮಿ

JCM 28 May 20
Published on

ಬೆಂಗಳೂರು: ಐದು ರಾಜ್ಯಗಳ ಜನರು ಕರ್ನಾಟಕ ಪ್ರವೇಶಿಸುವುದಕ್ಕೆ ನಿಷೇಧ ಹೇರಲು ರಾಜ್ಯ ಸಚಿವ ಸಂಪುಟ ನಿರ್ಧಾರ ಕೈಗೊಂಡಿಲ್ಲ ಎಂದು ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.

ಮಹಾರಾಷ್ಟ್ರ, ತಮಿಳುನಾಡು, ಗುಜರಾತ್, ಮಧ್ಯಪ್ರದೇಶ, ರಾಜಸ್ಥಾನದಿಂದ ಬರುವ ವಿಮಾನಗಳ ಸಂಖ್ಯೆಯನ್ನು ಕಡಿಮೆ ಮಾಡುವುದಕ್ಕೆ ಮಾತ್ರ ರಾಜ್ಯ ಸಚಿಸ ಸಂಪುಟ ತೀರ್ಮಾನ ಕೈಗೊಂಡಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರೊನಾ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ಕುರಿತು ಕೇಂದ್ರ ವಿಮಾನ ಯಾನ ಸಚಿವಾಲಯಕ್ಕೆ ಮನವಿ ಮಾಡಿದೆ. ಹೆಚ್ಚು ಜನ ಬಂದರೆ ಕ್ವಾರಂಟೈನ್ ಸೌಲಭ್ಯ ನೀಡಲು ಸಾಧ್ಯವಾಗುವುದಿಲ್ಲ ಎಂಬ ಸದುದ್ದೇಶ ಇದರ ಹಿಂದೆ ಇದೆ ಎಂದು ತಿಳಿಸಿದ್ದಾರೆ.

ಇದಕ್ಕೆ ಮುನ್ನ ಸಚಿವ ಸಂಪುಟ ಸಭೆ ನಂತರ ನಡೆದ ಸುದ್ದಿಗೋಷ್ಠಿಯಲ್ಲಿ ಸಚಿವರು ಈ ಐದು ರಾಜ್ಯಗಳಿಂದ ಜನರು ವಿಮಾನ ಮತ್ತು ರಸ್ತೆ ಮೂಲಕ ಬರುವುದನ್ನು ತಡೆಯಲು ನಿರ್ಧರಿಸಲಾಗಿದೆ ಎಂದು ಹೇಳಿದ್ದರು. ಇದು ದೇಶಾದ್ಯಂತ ಮಾಧ್ಯಮಗಳಲ್ಲಿ ದೊಡ್ಡ ಸುದ್ದಿಯಾಗಿ ಬಿತ್ತರವಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net