

ಬೆಂಗಳೂರು: ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಪಿಎಸ್ಐ) ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಹಿನೆ್ನೆಲೆಯಲ್ಲಿ ಸರ್ಕಾರ ಮರು ಪರೀಕ್ಷೆೆ ನಡೆಸಬಹುದು ಎನ್ನುವುದು ನಮ್ಮ ಅಭಿಪ್ರಾಯವಾಗಿದೆ ಎಂದು ಹೈಕೋರ್ಟ್ ಮೌಖಿಕವಾಗಿ ನುಡಿದಿದೆ.
ಪಿಎಸ್ಐ ನೇಮಕಾತಿಗೆ ಮರು ಪರೀಕ್ಷೆ ನಡೆಸಲು ಹಿಂದಿನ ಬಿಜೆಪಿ ಸರ್ಕಾರ ಹೊರಡಿಸಿದ್ದ ಆದೇಶ ರದ್ದುಪಡಿಸಬೇಕು. ಕಳಂಕಿತ ಮತ್ತು ಕಳಂಕರಹಿತ ಅಭ್ಯರ್ಥಿಗಳನ್ನು ಪ್ರತ್ಯೇಕಿಸಿ, ನೇಮಕಾತಿ ಆದೇಶ ನೀಡಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಆಯ್ಕೆಯಾಗಿದ್ದ 100ಕ್ಕೂ ಅಧಿಕ ಅಭ್ಯರ್ಥಿಗಳು ಸಲ್ಲಿಸಿರುವ ಅರ್ಜಿಗಳನ್ನು ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಹಾಗೂ ನ್ಯಾಯಮೂರ್ತಿ ಟಿ.ಜಿ. ಶಿವಶಂಕರೇಗೌಡ ಅವರಿದ್ದ ಪೀಠ ಶುಕ್ರವಾರ ವಿಚಾರಣೆ ನಡೆಸಿತು. ಅರ್ಜಿದಾರರ ಪರ ವಕೀಲರು ಮರು ಪರೀಕ್ಷೆೆ ನಡೆಸುವ ಸರ್ಕಾರದ ನಿರ್ಧಾರಕೆ್ಕೆ ಆಕ್ಷೇಪ ವ್ಯಕ್ತಪಡಿಸಿದರಲ್ಲದೆ, ಪ್ರಕರಣದಲ್ಲಿ ಹಿರಿಯ ವಕೀಲರು ವಾದ ಮಂಡಿಸಲಿದ್ದಾರೆ. ಅದಕ್ಕಾಗಿ ಸ್ವಲ್ಪ ಸಮಯದವರೆಗೆ ಅರ್ಜಿ ವಿಚಾರಣೆ ಮುಂದೂಡಬೇಕು ಎಂದು ಎಂದು ಕೋರಿದರು.
ಅದಕ್ಕೆ ನ್ಯಾಯಪೀಠ, ಸ್ವಲ್ಪ ಹೊತ್ತಿನವರೆಗೆ ಮುಂದೂಡಲಾಗದು. ಬೇಕಿದ್ದರೆ ಸೋಮವಾರ ಅರ್ಜಿ ವಿಚಾರಣೆ ನಡೆಸಲಾಗುವುದು ಎಂದು ಹೇಳಿತು. ಇದೇ ವೇಳೆ, ಸರ್ಕಾರ ಮರು ಪರೀಕ್ಷೆೆ ನಡೆಸಿದರೆ ಸಮಸೆ್ಯೆ ಏನು, (ಅರ್ಜಿದಾರರು) ಪರೀಕ್ಷೆೆ ಬರೆದು ಉತ್ತೀರ್ಣರಾಗಬಹುದಲ್ಲವೇ, ಅದೇ ರೀತಿ ಬೇರೆಯವರೂ ಪರೀಕ್ಷೆೆ ಬರೆಯಲಿ. ಸರ್ಕಾರ ಮರು ಪರೀಕ್ಷೆೆ ನಡೆಸಬಹುದು ಎನ್ನುವುದು ನಮ್ಮ ಅಭಿಪ್ರಾಯವಾಗಿದೆ ಎಂದು ಮೌಖಿಕವಾಗಿ ನುಡಿದ ಪೀಠ, ಮೇಲ್ನೋಟಕ್ಕೆ ನಾವು ನಿಮ್ಮ ಜತೆಗಿಲ್ಲ ಎಂದು ಅರ್ಜಿದಾರರ ಪರ ವಕೀಲರಿಗೆ ಹೇಳಿತು.
ಇದೇ ಸಂದರ್ಭದಲ್ಲಿ ಕೋರ್ಟ್ ಹಾಲ್ ಒಳಗೆ ಪ್ರವೇಶಿಸಿದ ಅಡ್ವೊಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ ಅವರನ್ನುದ್ದೇಶಿಸಿ ಮಾತನಾಡಿದ ಪೀಠ, ಸರ್ಕಾರ ಮರು ಪರೀಕ್ಷೆೆ ನಡೆಸಬಹುದು ಎನ್ನುವುದು ನಮ್ಮ ಅಭಿಪ್ರಾಯ. ಸರ್ಕಾರದ ಪ್ರಕ್ರಿಯೆಯಲ್ಲಿ ಅಡ್ಡಿ ಉಂಟು ಮಾಡುವುದೇಕೆ ಎಂದು ಅರ್ಜಿದಾರರ ಪರ ವಕೀಲರಿಗೆ ಹೇಳಿದ್ದೇವೆ ಎಂದು ಎಜಿ ಗಮನಕ್ಕೆ ತಂದಿತು.
ಪ್ರಕರಣದ ಸಂಬಂಧ ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ನ್ಯಾಯಪೀಠಕ್ಕೆ ವಿವರಿಸಲು ಎಜಿ ಮುಂದಾದರು. ಆಗ ನ್ಯಾಯಪೀಠ, ಅರ್ಜಿದಾರರ ಪರ ಹಿರಿಯ ವಕೀಲರು ವಾದ ಮಂಡಿಸಲಿದ್ದಾರಂತೆ. ಆದ್ದರಿಂದ, ಸೋಮವಾರ ಬೆಳಗ್ಗೆ 10.30ಕೆ್ಕೆ ಪ್ರಕರಣದ ವಿಚಾರಣೆ ನಡೆಸೋಣ ಎಂದು ತಿಳಿಸಿ, ಅರ್ಜಿ ವಿಚಾರಣೆ ಮುಂದೂಡಿತು.