

ಬೆಂಗಳೂರು: ರೇಣುಕಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿ ಸದ್ಯ ರೆಗ್ಯೂಲರ್ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ನಟ ದರ್ಶನ್ಗೆ (Darshan) ಹೈಕೋರ್ಟ್ ಮತ್ತೊಮ್ಮೆ ಬಿಗ್ ರಿಲೀಫ್ ನೀಡಿದ್ದು, ಜಾಮೀನಿಗೆ ಸಂಬಂಧಿಸಿದ ನಿಯಮಗಳನ್ನು ಸಡಿಲಿಸಿದೆ.
ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಮೊದಲು ಜಾಮೀನು ನೀಡುವಾಗ ಹೈಕೋರ್ಟ್ ಸೆಷನ್ಸ್ ಕೋರ್ಟ್ ವ್ಯಾಪ್ತಿ ಬಿಟ್ಟು ತೆರಳುವಂತಿರಲಿಲ್ಲ ಎಂಬ ಷರತ್ತನ್ನು ವಿಧಿಸಿ ಬೇಲ್ ಮಂಜೂರು ಮಾಡಿತ್ತು. ಇದರಿಂದಾಗ ದರ್ಶನ್ ಬೆಂಗಳೂರು ಬಿಟ್ಟು ಎಲ್ಲೇ ತೆರಳಬೇಕಾಗಿದ್ದರು ಕೋರ್ಟ್ನ ಅನುಮತಿ ಪಡೆಯಬೇಕಿತ್ತು. ಹೀಗಾಗಿ ಜಾಮೀನಿಗೆ ವಿಧಿಸಿರುವ ನಿಯಮಗಳನ್ನು ಸಡಿಲಿಸುವಂತೆ ನಟ ದರ್ಶನ್ ಹೈಕೋರ್ಟ್ ಮೊರೆ ಹೋಗಿದ್ದರು.
ಜಾಮೀನು ಪಡೆಯುವಾಗ ಅನಾರೋಗ್ಯದ ಕಾರಣ ನೀಡಿದ್ದರು. ಈಗ ದೇಶದೆಲ್ಲೆಡೆ ಸುತ್ತಾಡಲು ಬಯಸುತ್ತಿದ್ದಾರೆ’ ಎಂದು ಪ್ರಸನ್ನ ಕುಮಾರ್ ಆಕ್ಷೇಪಿಸಿದ್ದರು. ಆದಾಗ್ಯೂ, ಹೈಕೋರ್ಟ್ ದರ್ಶನ್ ಅವರ ಜಾಮೀನು ಷರತ್ತುಗಳನ್ನು ಸಡಿಲಿಸಿದೆ. ಕೋರ್ಟ್ ಅನುಮತಿಯಿಲ್ಲದೇ ದೇಶ ಬಿಟ್ಟು ತೆರಳುವಂತಿಲ್ಲ ಎಂದು ಸೂಚಿಸಿ ನಿಯಮಗಳನ್ನು ಸಡಿಸಿಲಿದೆ.
ಡೆವಿಲ್ ಸೇರಿದಂತೆ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಿರುವ ನಟ ದರ್ಶನ್ ಶೂಟಿಂಗ್ಗೆ ಮರಳಬೇಕಿದ್ದು, ಬೆಂಗಳೂರು ಸೇರಿದಂತೆ ವಿವಿಧೆಡೆ ತೆರಳಬೇಕಿದ್ದು, ಈ ಕಾರಣಕ್ಕಾಗಿಯೇ ಅವರು ಕೋರ್ಟ್ನ ಮೊರೆ ಹೋಗಿದ್ದರು. ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿರುವ ನಟ ದರ್ಶನ್ ಸದ್ಯ ಫಿಸಿಯೋಥೆರಪಿ ಚಿಕಿತ್ಸೆ ಪಡೆಯುತ್ತಿದ್ದು, ಬೆನ್ನು ನೋವು ಪೂರ್ಣ ಗುಣಮುಖವಾದ ಬಳಿಕವಷ್ಟೆ ಅವರು ಶೂಟಿಂಗ್ನಲ್ಲಿ ಭಾಗಿಯಾಗಲಿದ್ದಾರೆ ಎಂದು ವರದಿಯಾಗಿದೆ.