ಅತ್ಯಾಚಾರ ಪ್ರಕರಣ; Prajwal Revannaಗೆ ಬಿಗ್​ ರಿಲೀಫ್​ ನೀಡಿದ ಹೈಕೋರ್ಟ್​

Prajwal Revanna
Published on

ಬೆಂಗಳೂರು: ಅತ್ಯಾಚಾರ ಹಾಗೂ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್​ ಆರೋಪಿ ಪ್ರಜ್ವಲ್ ರೇವಣ್ಣಗೆ (Prajwal Revanna) ಬಿಗ್ ರಿಲೀಫ್​ ನೀಡಿದೆ. ಈ ಮೂಲಕ ಹಲವು ತಿಂಗಳುಗಳ ಬಳಿಕ ಪ್ರಜ್ವಲ್ ರೇವಣ್ಣಗೆ ಈ ಕೇಸ್‌ನಲ್ಲಿತ ತಾತ್ಕಾಲಿಕ ರಿಲೀಫ್‌ ಸಿಕ್ಕಂತಾಗಿದೆ.

ಅತ್ಯಾಚಾರ ಹಾಗೂ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣವನ್ನು ರದ್ದು ಮಾಡುವಂತೆ ಕೋರಿ ಪ್ರಜ್ವಲ್​ ರೇವಣ್ಣ  (Prajwal Revanna) ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಆರೋಪ ನಿಗದಿ ಮಾಡದಂತೆ ಸೂಚಿಸಿದ್ದಾರೆ. ಈ ಮೂಲಕ ಹಲವು ತಿಂಗಳ ಬಳಿಕ ಪ್ರಜ್ವಲ್​​ಗೆ ಬಿಗ್​ ರಿಲೀಫ್​ ಸಿಕ್ಕಿದಂತಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣಾಧೀನ ಕೋರ್ಟ್​ನಲ್ಲಿ ಜನವರಿ 13ರಂದು ಆರೋಪ ನಿಗದಿ ಮಾಡುವುದಕ್ಕೆ ಸಮಯ ನಿಗದಿಯಾಗಿತ್ತು. ಇದನ್ನು ಪ್ರಶ್ನಿಸಿ ಪ್ರಜ್ವಲ್ ರೇವಣ್ಣ ಪರ ವಕೀಲರು ಹೈಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಪ್ರಜ್ವಲ್​ ರೇವಣ್ಣಗೆ ತಾತ್ಕಾಲಿಕ ರಿಲೀಫ್​ ನೀಡಿದೆ.

2024ರಲ್ಲಿ ನಡೆದ ಲೋಕಸಭೆ ಚುನಾವಣೆ ವೇಳೆ ಪ್ರಜ್ವಲ್ ರೇವಣ್ಣಗೆ (Prajwal Revanna) ಸಂಬಂಧಿಸಿದ ಅಶ್ಲೀಲ ವಿಡಿಯೋಗಳು ವೈರಲ್​ ಆಗಿದ್ದವು. ಸಂತ್ರಸ್ತೆಯರು ನೀಡಿದ ದೂರನ್ನು ಆಧರಿಸಿ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡವನ್ನು ರಚಿಸಿ ವಿಚಾರಣೆಗೆ ಆದೇಶಿಸಿತ್ತು. ವಿದೇಶದಲ್ಲಿ ತಲೆಮಾರಿಸಿಕೊಂಡಿದ್ದ ಪ್ರಜ್ವಲ್​ ಹಲವು ತಿಂಗಳುಗಳ ಬಳಿಕ ಶರಣಾಗಿದ್ದರು. ಈ ಪ್ರಕರಣ ದೇಶವ್ಯಾಪಿ ಚರ್ಚೆಯಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net