ಯುಪಿಐ ಬಳಕೆಯಲ್ಲಿ ಕರ್ನಾಟಕ ನಂ. 2

UPI transactions
Published on

ಮುಂಬೈ: ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೖೆಮಾಸಿಕದಲ್ಲಿ (ಏಪ್ರಿಲ್​ನಿಂದ ಜೂನ್​ವರೆಗಿನ ಅವಧಿ) ಯುನಿಫೈಡ್ ಪೇಮೆಂಟ್ಸ್ ಇಂಟರ್​ಫೇಸ್ (ಯುಪಿಐ) ವಹಿವಾಟುಗಳಲ್ಲಿ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದ್ದು, ಕರ್ನಾಟಕ ಎರಡನೇ ಸ್ಥಾನ ಅಲಂಕರಿಸಿದೆ. ನಂತರದ ಸ್ಥಾನಗಳಲ್ಲಿ ಉತ್ತರ ಪ್ರದೇಶ, ತೆಲಂಗಾಣ ಮತ್ತು ತಮಿಳುನಾಡು ಇವೆ. ಮೇ ತಿಂಗಳಲ್ಲಿ ಮೊದಲ 4 ರಾಜ್ಯಗಳು ಒಟ್ಟು 10 ಲಕ್ಷಕ್ಕೂ ಹೆಚ್ಚು ವಹಿವಾಟುಗಳನ್ನು ಮಾಡಿದ್ದರೆ, ಜೂನ್​ನಲ್ಲಿ ಈ ಸಂಖ್ಯೆ ಕಡಿಮೆಯಾಗಿದೆ. ದೇಶಾದ್ಯಂತ ಒಂದು ತಿಂಗಳಲ್ಲಿ 24 ಲಕ್ಷ ಕೋಟಿ ರೂ.ಗಿಂತ ಹೆಚ್ಚು ಮೌಲ್ಯದ ಯುಪಿಐ ವಹಿವಾಟು ನಡೆಯುತ್ತದೆ. ಮೇ ತಿಂಗಳಲ್ಲಿ ಮಹಾರಾಷ್ಟ್ರ 3 ಲಕ್ಷ ಕೋಟಿ ರೂ. ಮೌಲ್ಯದ ಯುಪಿಐ ವಹಿವಾಟು ನಡೆಸಿದ್ದರೆ, ಕರ್ನಾಟಕ ಸುಮಾರು 2 ಲಕ್ಷ ಕೋಟಿ ರೂ. ವಹಿವಾಟು ದಾಖಲಿಸಿದೆ. ಉತ್ತರ ಪ್ರದೇಶದಲ್ಲಿ 1.8 ಲಕ್ಷ ಕೋಟಿ ರೂ., ತೆಲಂಗಾಣದಲ್ಲಿ 1.75 ಲಕ್ಷ ಕೋಟಿ ರೂ. ಮೌಲ್ಯದ ಯುಪಿಐ ವಹಿವಾಟುಗಳು ನಡೆದಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net