ಇನ್ನು ಬಿಪಿಎಲ್ ಕಾರ್ಡ್ ಹೊಂದಿರುವ ಮನೆಯ ಹೆಣ್ಮಕ್ಕಳಿಗೆ ಶೇ.15ರಷ್ಟು ಟ್ಯೂಷನ್ ಫೀಸ್‌ನಲ್ಲಿ ವಿನಾಯಿತಿ

open university karnataka
Published on

ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವು (ಕಾರಾಮುವಿ) ವಿವಿಧ ವರ್ಷದ ಪದವಿ ಹಾಗೂ ಸ್ನಾತಕೋತ್ತರ ಪದವಿ ಪ್ರವೇಶಕ್ಕೆ ಬಿಪಿಎಲ್ ಕಾರ್ಡು ಹೊಂದಿರುವ ಮಹಿಳಾ ಅಭ್ಯರ್ಥಿಗಳಿಗೆ ಶೇ.15ರಷ್ಟು ಬೋಧನಾ ಶುಲ್ಕ ವಿನಾಯಿತಿ ಪ್ರಕಟಿಸಿದೆ.

ಕಾರಾಮುವಿ 2022-23ನೇ (ಜುಲೈ ಆವೃತ್ತಿ) ಶೈಕ್ಷಣಿಕ ಸಾಲಿನ ದ್ವಿತೀಯ ಮತ್ತು ತೃತೀಯ ವರ್ಷದ ಪದವಿ ಕೋರ್ಸುಗಳಾದ ಬಿಎ, ಬಿಕಾಂ, ಬಿಬಿಎ, ಬಿಸಿಎ, ಬಿಎಸ್ಸಿ ಹಾಗೂ ಅಂತಿಮ ಸ್ನಾತಕೋತ್ತರ ಪದವಿಗಳಾದ ಎಂಎ, ಎಂಸಿಜೆ, ಎಂಕಾಂ, ಎಂಬಿಎ, ಎಂಎಸ್ಸಿ, ಪ್ರೋಗ್ರಾಮ್ಸ್ ಕೋರ್ಸುಗಳ ಪ್ರವೇಶಕ್ಕೆ ದಂಡ ಶುಲ್ಕವಿಲ್ಲದೆ ಜ.15ರವರೆಗೆ ಅವಕಾಶ ನೀಡಿದೆ.

ಬಿಪಿಎಲ್ ಕಾರ್ಡುದಾರ ಕುಟುಂಬದ ಮಹಿಳಾ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಬೋಧನಾ ಶುಲ್ಕ ವಿನಾಯಿತಿ ನೀಡಿದೆ. ಹೆಚ್ಚಿನ ವಿವರಗಳಿಗೆ ಮಲ್ಲೇಶ್ವರದ 13ನೇ ಅಡ್ಡರಸ್ತೆ, 4ನೇ ಮುಖ್ಯರಸ್ತೆಯಲ್ಲಿರುವ ಕರಾಮುವಿ ಮಹಿಳಾ ಪ್ರಾದೇಶಿಕ ಕೇಂದ್ರಕ್ಕೆ ಭೇಟಿ ನೀಡಬಹುದು ಅಥವಾ ದೂ: 080-23448821ಗೆ ಕರೆ ಮಾಡಬಹುದು ಎಂದು ವಿಶ್ವವಿದ್ಯಾನಿಲಯದ ಪ್ರಾದೇಶಿಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net