

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಸಂದರ್ಭದಲ್ಲಿ ವರ್ಗಾವಣೆಗೊಂಡಿದ್ದ ಡಿವೈಎಸ್ಪಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ.
ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಕಾಂಗ್ರೆಸ್ ಪಕ್ಷ ಅಧಿಕಾರದ ಗದ್ದುಗೆ ಏರಿದೆ. ಕಾಂಗ್ರೆಸ್ ಅಧಿಕಾರ ವಹಿಸುತ್ತಿದ್ದಂತೆ ಬೆಂಗಳೂರು ನಗರ ಕಮಿಷನರ್ ಸೇರಿದಂತೆ, ಕೆಲ ಐಪಿಎಸ್ ಅಧಿಕಾರಿಗಳ ವರ್ಗಾವಣೆಯಾಗಿದೆ. ಜತೆಗೆ ಚುನಾವಣೆ ಹಿನ್ನೆಲೆ ವರ್ಗಾವಣೆಯಾಗಿದ್ದ 292 ಇನ್ಸ್ಪೆಕ್ಟರ್ಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಈಗಾಗಲೇ ಆದೇಶಿಸಿದೆ.
ಇದೀಗ ಚುನಾವಣಾ ಕರ್ತವ್ಯಕ್ಕೆ ವರ್ಗಾವಣೆಗೊಂಡಿದ್ದ 51 ಡಿವೈಎಸ್ಪಿಗಳಿಗೆ ಈ ಹಿಂದೆ ಕರ್ತವ್ಯ ನಿರ್ವಹಿಸುತ್ತಿದ್ದ ಸ್ಥಳಗಳಿಗೆ ಹಿಂತಿರುಗುವಂತೆ ಸರ್ಕಾರ ಆದೇಶ ಹೊರಡಿಸಿದೆ. ಕೂಡಲೇ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚಿಸಿದೆ. ಯಾರು, ಎಲ್ಲಿಗೆ ಎಂಬ ಪೂರ್ಣ ಪಟ್ಟಿ ಇಲ್ಲಿದೆ.