​ಬಿರುಸು ಪಡೆದುಕೊಂಡ ಮುಂಗಾರು; ಕರಾವಳಿ ಜಿಲ್ಲೆಯಲ್ಲಿ ಯೆಲ್ಲೋ ಅಲಟ್

rainnn
Published on

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ನಾಡಿನ ರೈತರಿಗೆ ಸಂತಸ ತಂದಿದೆ. ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ. ಹೀಗಾಗಿ ಹವಾಮಾನ ಇಲಾಖೆ ದಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಯೆಲ್ಲೋ ಅರ್ಲಟ್​ ಘೋಷಿಸಿದೆ.

ಮಲೆನಾಡಿನಲ್ಲೂ ಉತ್ತಮ ಮಳೆಯಾಗುವ ಸಾಧ್ಯತೆ ಇದ್ದು, ಕೊಡಗಿನಲ್ಲಿ ಶುಕ್ರವಾರದಿಂದ ಮೂರು ದಿನ ಯೆಲ್ಲೋ ಅರ್ಲಟ್​ ಇರಲಿದೆ. ಇದರಿಂದ ಸಹಜವಾಗಿಯೇ ಕರಾವಳಿಯಲ್ಲಿ ಬಿಸಿಲಿನ ವಾತಾವರಣ ಕಡಿಮೆಯಾಗುತ್ತಿದೆ.

ಉತ್ತರ ಒಳನಾಡು ಹಾಗೂ ದಣ ಒಳನಾಡಿನ ಜಿಲ್ಲೆಗಳಲ್ಲೂ ಮಳೆ ಬಿರುಸು ಪಡೆದುಕೊಂಡಿದೆ. ಬೆಳಗಾವಿ, ಬೀದರ್​, ಗದಗ, ಹಾವೇರಿ, ಕಲಬುರಗಿ, ಚಿಕ್ಕಮಗಳೂರು, ಚಾಮರಾಜನಗರ, ದಾವಣಗೆರೆ, ಹಾಸನ, ಮಂಡ್ಯ ಸೇರಿದಂತೆ ಇತರೆ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಉತ್ತಮ ಮಳೆಯಾಗುವ ಸಾಧ್ಯತೆ ಹೆಚ್ಚಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net