ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೋ ಅರ್ಲಟ್​; ಒಳನಾಡು ಜಿಲ್ಲೆಗಳಲ್ಲೂ ಉತ್ತಮ ಮಳೆ

rain
Published on

ಬೆಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ಉತ್ತಮ ಮಳೆಯಾಗುತ್ತಿದೆ. ನಾಳೆಯಿಂದ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಮುನ್ನೆಚ್ಚರಿಕೆ ದೃಷ್ಟಿಯಿಂದ ಹವಾಮಾನ ಇಲಾಖೆ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ನಾಳೆ ಯೆಲ್ಲೋ ಅರ್ಲಟ್​ ಘೋಷಿಸಿದೆ.

ಬೆಳಗಾವಿ, ಹಾವೇರಿ, ಬೀದರ್​, ಗದಗ, ಕಲಬುರಗಿ, ಶಿವಮೊಗ್ಗ, ಹಾಸನ, ಕೊಡಗು ಸೇರಿದಂತೆ ಮಲೆನಾಡು ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲೂ ಇಂದಿನಿಂದ ಉತ್ತಮ ಮಳೆಯಾಗಲಿದೆ.

ದಕ್ಷಿಣ ಒಳನಾಡು ಜಿಲ್ಲೆಗಳಾದ ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಶಿವಮೊಗ್ಗ, ವಿಜಯನಗರ, ರಾಮನಗರ, ಮಂಡ್ಯ ಸೇರಿದಂತೆ ದಣ ಒಳನಾಡು ಜಿಲ್ಲೆಗಳಲ್ಲಿ ಇಂದು ಉತ್ತಮ ಮಳೆ ಬೀಳಲಿದೆ. ಆದರೆ ಮುಂದಿನ 24 ಗಂಟೆಯಿಂದ ಮಳೆಯ ಪ್ರಮಾಣ ತಗ್ಗಬಹುದು ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net