ರಾಜ್ಯದ ಹಲವೆಡೆ ವರುಣನ ಮುನ್ಸೂಚನೆ; ಏಲಕ್ಕಿ ನಾಡಿನಲ್ಲಿ ಭಾರೀ ಗಾಳಿ-ಆಲಿಕಲ್ಲು ಮಳೆ! ಹಲವು ಮರಗಳು ಧರೆಗೆ | Karnataka Rains

ವಿಜಯವಾಣಿ (10)
Published on

Karnataka Rains: ಬೆಂಗಳೂರು, ಮೈಸೂರು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಚಾಮರಾಜನಗರ ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ಏ.18 ರವರೆಗೂ ಭಾರೀ ಮಳೆ ಬೀಳುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಈಗಾಗಲೇ ಬೆಂಗಳೂರು, ಮೈಸೂರು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಬೇಸಿಗೆಗಾಲದ ಮಳೆ ಶುರುವಾಗಿದೆ. ಇನ್ನೂ ಕೆಲವೆಡೆ ತುಂತುರು ಮಳೆ ಬೀಳುತ್ತಿದೆ. ಹವಾಮಾನ ಇಲಾಖೆ ಮುನ್ಸೂಚನೆ ಬೆನ್ನಲ್ಲೇ ಏಲಕ್ಕಿ ನಾಡು ಹಾವೇರಿಯಲ್ಲಿ ಭಾರೀ ಗಾಳಿ-ಮಳೆ ಆಗಿದ್ದು, 20ಕ್ಕೂ ಹೆಚ್ಚು ಮರಗಳು ಧರೆಗೆ ಉರುಳಿವೆ.

ಬೆಳಗ್ಗೆಯಿಂದ ಭಾರೀ‌ ಬಿಸಿಲು ನೋಡಿದ ಜನರು, ಸಂಜೆಯ ವೇಳೆಗೆ ಗುಡುಗು, ಗಾಳಿ ಸಹಿತ ಸುರಿದ ಆಲಿಕಲ್ಲು ಮಳೆಗೆ ಕಂಗಾಲಾಗಿದ್ದಾರೆ. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಸುರಿದ ಮಳೆ, ವಾಹನಗಳ ಸಂಚಾರಕ್ಕೆ ಭಾರೀ ಅಡಚಣೆ ಉಂಟುಮಾಡಿದೆ. ಭಾರೀ ಮಳೆ-ಗಾಳಿಗೆ 20ಕ್ಕೂ ಅಧಿಕ ಮರಗಳು, ಹತ್ತಾರು ವಿದ್ಯುತ್ ಕಂಬಗಳು ನೆಲಕ್ಕೆ ಉರುಳಿ ಬಿದ್ದಿವೆ‌. ಒಂದು ಕಾರು, ಹಲವು ಬೈಕ್​ಗಳು ಜಖಂಗೊಂಡಿವೆ.

ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಮೈಸೂರು, ಹಾಸನ, ಉಡುಪಿ, ದಕ್ಷಿಣ ಕನ್ನಡ, ಹಾವೇರಿ, ಚಾಮರಾಜನಗರ, ಮಂಡ್ಯ, ರಾಮನಗರ, ಕೋಲಾರ, ತುಮಕೂರು ಜಿಲ್ಲೆಗಳಲ್ಲಿ ನಾಳೆ (ಏ.16) ಮಳೆ ಸುರಿಯುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net