ರಾಜ್ಯದಲ್ಲಿ 296 ಕೋವಿಡ್ ಹೊಸ ಪ್ರಕರಣಗಳು:

Covid
Published on

ಬೆಂಗಳೂರು: ರಾಜ್ಯದಲ್ಲಿ ಸೋಮವಾರ 296 ಹೊಸ ಕೋವಿಡ್ ಸೋಂಕು ಪ್ರಕರಣಗಳು ವರದಿಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1,245ಕ್ಕೆ ಏರಿಕೆಯಾಗಿದೆ. ಒಂದು ಸಾವು ವರದಿಯಾಗಿದೆ.

ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 5,021 ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಬೆಂಗಳೂರಿನಲ್ಲಿ 131, ಮೈಸೂರು 29, ಹಾಸನ 17, ತುಮಕೂರು 16, ದಕ್ಷಿಣ ಕನ್ನಡ 13, ಬಳ್ಳಾರಿ 11, ಮಂಡ್ಯ 9, ಕೋಲಾರ ಮತ್ತು ಶಿವಮೊಗ್ಗದಲ್ಲಿ ತಲಾ 7, ಚಿಕ್ಕಬಳ್ಳಾಪುರ, ಗದಗ 6, ಬೆಂಗಳೂರು ಗ್ರಾಮಾಂತರ ಮತ್ತು ಚಾಮರಾಜನಗರ 5, ದಾವಣಗೆರೆ, ಧಾರವಾಡ, ಕಲಬುರಗಿ, ಕೊಪ್ಪಳ ಮತ್ತು ವಿಜಯನಗರ ತಲಾ 4, ಬಾಗಲಕೋಟೆ 3, ಬೆಳಗಾವಿ, ಬೀದರ್, ಚಿಕ್ಕಮಗಳೂರು ಮತ್ತು ಚಿತ್ರದುರ್ಗ ತಲಾ ಇಬ್ಬರು ಹಾಗೂ ರಾಯಚೂರು, ರಾಮನಗರ ಮತ್ತು ಉಡುಪಿ ತಲಾ ಒಬ್ಬರಂತೆ 1,245 ಸೋಂಕು ಪ್ರಕರಣಗಳು ವರದಿಯಾಗಿವೆ.

ಒಟ್ಟು ಸಕ್ರಿಯ ಪ್ರಕರಣಗಳಲ್ಲಿ 1,179 ಮಂದಿ ಮನೆ ಆರೈಕೆಯಲ್ಲಿ ಇದ್ದಾರೆ. 66 ಮಂದಿ ಆಸ್ಪತ್ರೆಗೆ ದಾಖಲಾಗಿದ್ದು, 20 ಮಂದಿ ತುರ್ತು ನಿಗಾ ಘಟಕದಲ್ಲಿ ಹಾಗೂ 46 ಮಂದಿ ಸಾಮಾನ್ಯ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೈಸೂರಿನ 55 ವರ್ಷದ ವ್ಯಕ್ತಿ ಜ್ವರ, ಕೆಮ್ಮು, ಉಸಿರಾಟದ ತೊಂದರೆಯಿಂದ ಡಿ. 26ರಂದು ಜಿಲ್ಲೆಯ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಲಿಸದೆ ಡಿ. 29ರಂದು ಮೃತಪಟ್ಟಿದ್ದಾರೆ. ಮೃತರು ಕೋವಿಡ್ ಲಸಿಕೆ ಪಡೆದಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net