2nd PUC ಫಲಿತಾಂಶ ಪ್ರಕಟ; ದಕ್ಷಿಣ ಕನ್ನಡ ಫಸ್ಟ್, ಉಡುಪಿ ಸೆಕೆಂಡ್.. ಬಾಲಕಿಯರೇ ಮೇಲುಗೈ

930995-results
Published on

ಬೆಂಗಳೂರು: ಕಳೆದ ಮಾರ್ಚ್‌ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ  2023-24ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಫಲಿತಾಂಶ ಇಂದು ಪ್ರಕಟಗೊಂಡಿದೆ.

ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆ  ಇಂದು ಬೆಳಗ್ಗೆ 10 ಗಂಟೆಗೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದ್ದು, ಬೆಳಗ್ಗೆ 11 ಗಂಟೆಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್​​ಸೈಟ್​ನಲ್ಲಿ ಫಲಿತಾಂಶ ಪ್ರಕಟವಾಗಲಿದೆ.

ಈ ಬಾರಿ ರಾಜ್ಯದಾದ್ಯಂತ ಸುಮಾರು 1,124 ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆದಿತ್ತು. ಸುಮಾರು 6.98 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಭಾಗಿಯಾಗಿದ್ದರು.

ಈ ಬಾರಿ ದ್ವಿತೀಯ ಪಿಯುಸಿ 81.15% ಫಲಿತಾಂಶ ಬಂದಿದೆ. ಪ್ರತೀ ವರ್ಷದಂತೆ ಈ ಬಾರಿ ಕೂಡ  ಬಾಲಕಿಯರೇ (80.25%) ಮೇಲುಗೈ ಸಾಧಿಸಿದ್ದಾರೆ. ವಿಜ್ಞಾನ ವಿಭಾಗ 89.96% , ವಾಣಿಜ್ಯ ವಿಭಾಗ 80.94%, ಕಲಾ ವಿಭಾಗದಲ್ಲಿ 68.36 % ಫಲಿತಾಂಶ ಬಂದಿದೆ.

ಕಳೆದ ಬಾರಿಯಂತೆ ಈ ಬಾರಿ ಕೂಡ  ದಕ್ಷಿಣ ಕನ್ನಡ (97.37%) ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದೆ. ಉಡುಪಿ (96.80%) ಎರಡನೇ ಸ್ಥಾನ ಪಡೆದಿದೆ. ವಿಜಯಪುರ (94.89%) ತೃತೀಯ ಸ್ಥಾನ ಪಡೆದಿದೆ.  ಗದಗ (72.86%) ಕೊನೆಯ ಸ್ಥಾನ ಪಡೆದಿದೆ.

ವಿದ್ಯಾರ್ಥಿಗಳು ಮತ್ತು ಪೋಷಕರು ‌ ಶಿಕ್ಷಣ ಇಲಾಖೆಯ ವೆಬ್‌ಸೈಟ್‌ www.karresultsnic.in ಭೇಟಿ ನೀಡಿ ಫಲಿತಾಂಶವನ್ನು ವೀಕ್ಷಿಸಬಹುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net