2023ರ ಎಸ್​ಎಸ್​ಎಲ್​ಸಿ ಮರುಮೌಲ್ಯಮಾಪನ ಫಲಿತಾಂಶ ಪ್ರಕಟ

results
Published on

ಬೆಂಗಳೂರು: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ(ಕೆಎಸ್‌ಇಇಬಿ) 10ನೇ ತರಗತಿಯ ಮರುಮೌಲ್ಯಮಾಪನ ಫಲಿತಾಂಶಗಳನ್ನು ಪ್ರಕಟಿಸಿದೆ. ಉತ್ತರ ಪತ್ರಿಕೆಗಳ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ತಮ್ಮ ಎಸ್‌ಎಸ್‌ಎಲ್‌ಸಿ 10ನೇ ತರಗತಿ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್​​ನಲ್ಲಿ ವೀಕ್ಷಿಸಬಹುದಾಗಿದೆ.

ಮರುಮೌಲ್ಯಮಾಪನ ಫಲಿತಾಂಶಗಳನ್ನು ಪರಿಶೀಲಿಸಲು ಈ ಕೆಳಗಿನ ಕ್ರಮ ಅನುಸರಿಸಿ.
ಕರ್ನಾಟಕ ಎಸ್​ಎಸ್​ಎಲ್​ಸಿ ಫಲಿತಾಂಶದ ಅಧಿಕೃತ ವೆಬ್‌ಸೈಟ್‌ kseeb.karnataka.gov.in ಭೇಟಿ ನೀಡಿ. ಮುಖಪುಟದ ಫಲಿತಾಂಶದ ಲಿಂಕ್ ಮೇಲೆ ಕ್ಲಿಕ್​​ ಮಾಡಿ.

ನಂತರ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ ಫಲಿತಾಂಶವನ್ನು ಪರೀಕ್ಷಿಸಬಹುದಾಗಿದೆ. ಇತರೆ ಹೆಚ್ಚಿನ ಮಾಹಿತಿ ಅಥವಾ ಅಧಿಸೂಚನೆಗಳಿಗಾಗಿ ಕೆಎಸ್‌ಇಇಬಿಯ ಅಧಿಕೃತ ವೆಬ್‌ಸೈಟ್​​ಗೆ ಭೇಟಿ ನೀಡಿ.(ಏಜೆನ್ಸೀಸ್​​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net