ಬಜೆಟ್ನಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಿಗೆ ಸಿಕ್ಕ ಅನುದಾನ ಹೀಗಿದೆ
Published on:
Copied
Follow Us
ಬೆಂಗಳೂರು: ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದ ರಾಜ್ಯ ಬಜೆಟ್ನಲ್ಲಿ ಶಿಕ್ಷಣ ಕ್ಷೇತ್ರಕ್ಕೂ ಕೋಟ್ಯಂತರ ರೂಪಾಯಿ ಅನುದಾನ ಸಿಕ್ಕಿದೆ. ಸರ್ಕಾರಿ ಶಾಲೆಗಳ ಮತ್ತು ಬಡಮಕ್ಕಳ ಶಿಕ್ಷಣದ ಉತ್ತೇಜನದ ನಿಟ್ಟಿನಲ್ಲಿ ಪ್ರಮುಖ ಯೋಜನೆಗಳಿಗೆ ಹಣ ಮೀಸಲಿಟ್ಟಿದ್ದಾರೆ.
ಆಯ್ದ 50 ಕರ್ನಾಟಕ ಪಬ್ಲಿಕ್ ಶಾಲೆಗಳ ಸರ್ವತೋಮುಖ ಅಭಿವೃದ್ಧಿಗೆ 100 ಕೋಟಿ ರೂ. ಅನುದಾನ
100 ಕರ್ನಾಟಕ ಪಬ್ಲಿಕ್ ಸ್ಕೂಲ್ಗಳ 14 ರಿಂದ 18 ವರ್ಷ ವಯಸ್ಸಿನ ವಿದ್ಯಾರ್ಥಿಗಳಿಗೆ ವೃತ್ತಿ ತರಬೇತಿ
2 ವರ್ಷಗಳಲ್ಲಿ 100 ಕೋಟಿ ರೂ. ವೆಚ್ಚದಲ್ಲಿ ಶಾಲಾ ಶೌಚಗೃಹಗಳ ಉನ್ನತೀಕರಣ ಮತ್ತು ನೀರಿನ ಸೌಲಭ್ಯ. ಪಂಚಾಯತ್ ರಾಜ್ ಸಂಸ್ಥೆಗಳ ಮೂಲಕ ನಿರ್ವಹಣೆ, ಪ್ರಸಕ್ತ ಸಾಲಿನಲ್ಲಿ 50 ಕೋಟಿ ರೂ. ಅನುದಾನ
ಪ್ರೌಢಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳ ಮೂಲಭೂತ ಸೌಕರ್ಯಕ್ಕೆ 150 ಕೋಟಿ ರೂಪಾಯಿ, ಸರ್ಕಾರಿ ಶಾಲೆಗಳಿಗೆ ಪೀಠೋಪಕರಣ ಮತ್ತು ಕಲಿಕಾ ಸಾಮಗ್ರಿ ಒದಗಿಸಲು 50 ಕೋಟಿ ರೂ. ಅನುದಾನ
ಎಲ್ಲ ಸರ್ಕಾರಿ ಪ್ರೌಢಶಾಲೆಗಳಿಗೂ ಕಂಪ್ಯೂಟರ್ ಲ್ಯಾಬ್ ಸೌಲಭ್ಯ ವಿಸ್ತರಣೆ
ರಾಜ್ಯದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು ಕಲಿತ ಶಾಲೆಗಳ ಸಮಗ್ರ ಅಭಿವೃದ್ಧಿಗೆ ಕ್ರಮ
ಡಿಜಿಟಲ್ ಕಲಿಕೆಗೆ ಅನುವಾಗುವಂತೆ ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಪಾಲಿಟೆಕ್ನಿಕ್ ಮತ್ತು ಇಂಜಿನಿಯರಿಂಗ್ ಕಾಲೇಜುಗಳಲ್ಲಿ 50 ಕೋಟಿ ರೂ. ವೆಚ್ಚದಲ್ಲಿ ಸ್ಮಾರ್ಟ್ ಕ್ಲಾಸ್ ರೂಮ್ಗಳ ಅಭಿವೃದ್ಧಿ.
ಕೇಂದ್ರ ಮತ್ತು ರಾಜ್ಯ ಆಡಳಿತ ಸೇವೆಗಗಳು, ಬ್ಯಾಂಕಿಂಗ್, ರೈಲೆ ಇತ್ಯಾದಿ ಉದ್ಯೋಗಗಳಲ್ಲಿ ಹೆಚ್ಚಿನ ಸಂಖ್ಯೆಯ ಕನ್ನಡಿಗರ ಸೇರ್ಪಡೆ ಉತ್ತೇಜಿಸಲು “ಸಾಮರ್ಥ್ಯ-ಸಾರಥ್ಯ” ಕಾರ್ಯಕ್ರಮ; 5 ಲಕ್ಷ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿಗೆ 5 ಕೋಟಿ ಅನುದಾನ.
ಜಾಗತಿಕಮಟ್ಟದ ಅತ್ಯುತ್ತಮ ವಿಶ್ವವಿದ್ಯಾಲಯಗಳ ಸಹಯೋಗದೊಂದಿಗೆ ಶೈಕ್ಷಣಿಕ ನಾಯಕತ್ವ ಜಾರಿ
ರಾಜ್ಯದ ಆಯ್ದ ಮಹಾನಗರಪಾಲಿಕೆ ಮತ್ತು ನಗರಸಭೆಗಳಲ್ಲಿ ಪ್ರಾಯೋಗಿಕವಾಗಿ ಸಂಜೆ ಕಾಲೇಜು ಪ್ರಾರಂಭ
ರಾಷ್ಟ್ರೀಯ ಶಿಕ್ಷಣ ನೀತಿ 2020ರ ಕುರಿತು ಅರಿವು ಮೂಡಿಸಲು ಶಿಕ್ಷಣ ಇಲಾಖೆಯ ಸಿಬ್ಬಂದಿಗೆ ಕಾರ್ಯಾಗಾರ