ಬೆಂಗಳೂರು: ಕರೊನಾ ಸಂಕಷ್ಟದ ನಡುವೆಯೂ ಇಂದು ಮಂಡನೆಯಾದ ರಾಜ್ಯ ಬಜೆಟ್ನಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ಹಲವು ಪ್ರಮುಖ ಯೋಜನೆ-ಕಾರ್ಯಕ್ಕೆ ಕೋಟ್ಯಂತರ ಹಣ ಮೀಸಲಿಟ್ಟಿದ್ದಾರೆ. ಅವುಗಳ ಸಂಕ್ಷಿಪ್ತ ಮಾಹಿತಿ ಇಲ್ಲಿದೆ.
ಅಯೋಧ್ಯೆ ಶ್ರೀರಾಮ ಜನ್ಮಭೂಮಿಯಲ್ಲಿ ಕರ್ನಾಟಕದ ಯಾತ್ರಿ ನಿವಾಸ ನಿರ್ಮಾಣಕ್ಕೆ 10 ಕೋಟಿ ರೂಪಾಯಿ
ಆದಿಚುಂಚನಗಿರಿ ನಾಥ ಪಾರಂಪರಿಕ ಕೇಂದ್ರಕ್ಕೆ 10 ಕೋಟಿ ರೂ.
ಎಸ್.ಎಲ್.ಭೈರಪ್ಪ ಅವರ ಪರ್ವ ನಾಟಕವನ್ನು ರಾಜ್ಯಾದ್ಯಂತ ರಂಗಾಯಣಗಳ ಮೂಲಕ ನಾಟಕ ಪ್ರದರ್ಶನಕ್ಕೆ 1 ಕೋಟಿ ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ 50 ಕೋಟಿ ರೂ.
ಕೃಷಿ ಸಂಚಯ ಯೋಜನೆಗೆ 831 ಕೋಟಿ ರೂ. ಮೀಸಲು
ಒಕ್ಕಲಿಗರ ನಿಗಮಕ್ಕೆ 500 ಕೋಟಿ ರೂ. ಘೋಷಣೆ
ಬಸವಣ್ಣ ಜನ್ಮ ಸ್ಥಳ ಬಸವನಬಾಗೇವಾಡಿಯ ಇಂಗಳೇಶ್ವರ ಗ್ರಾಮ ಅಭಿವೃದ್ಧಿಗೆ 5 ಕೋಟಿ ರೂ.
ಕಬಿನಿ ಆಣೆಕಟ್ಟಿನಲ್ಲಿ ಕೆಆರ್ಎಸ್ ಮಾದರಿಯಲ್ಲಿ 50 ಕೋಟಿ ರೂ. ವೆಚ್ಚದಲ್ಲಿ ಥೀಮ್ ಪಾರ್ಕ್ ನಿರ್ಮಾಣ
ಬೆಂಗಳೂರು ಗ್ರಾಮಾಂತರ, ತುಮಕೂರು, ಚಿಕ್ಕಬಳ್ಳಾಪುರಗಳಲ್ಲಿ ಒಟ್ಟು 234 ಕೆರೆ ತುಂಬಿಸುವ ಯೋಜನೆಗೆ 500 ಕೋಟಿ ಅನುದಾನ
ಮಹಾದಾಯಿ ಯೋಜನೆಗೆ 1677 ಕೋಟಿ ರೂ. ಅನುದಾನ
ಸೋಮೇಶ್ವರ ಕಡಲ ತೀರದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ 10 ಕೋಟಿ ರೂಪಾಯಿ
ಜೈನ ಪುಣ್ಯ ಕ್ಷೇತ್ರಗಳ ಅಭಿವೃದ್ಧಿಗೆ 50 ಕೋಟಿ ರೂಪಾಯಿ
ಹೂವಿನ ಮಾರುಕಟ್ಟೆ ನಿರ್ಮಾಣಕ್ಕೆ 50 ಕೋಟಿ ರೂಪಾಯಿ
10 ಕೋಟಿ ರೂ. ವೆಚ್ಚದಲ್ಲಿ ಚಿಗುರು ಕಾರ್ಯಕ್ರಮ
ಶಿವಮೊಗ್ಗ, ಮೈಸೂರಿನಲ್ಲಿ ಕಿದ್ವಾಯಿ ಮಾದರಿ ಆಸ್ಪತ್ರೆ ನಿರ್ಮಾಣಕ್ಕೆ 100 ಕೋಟಿ ರೂ. ಅನುದಾನ
ಕಳಸಾ ಬಂಡೂರಿ ಯೋಜನೆಗೆ 1677 ಕೋಟಿ ರೂ.ಗೆ ಆಡಳಿತಾತ್ಮಕ ಅನುಮೋದನೆ
ಭದ್ರಾ ಮೇಲ್ದಂಡೆ ಯೋಜನೆಗೆ 21,474 ಕೋಟಿ ರೂ. ಅನುಮೋದನೆ
ಕೃಷ್ಣಾ ಭಾಗ್ಯ ಜಲನಿಗನ ನಿಯಮಿತಕ್ಕೆ 5600 ಕೋಟಿ ರೂಪಾಯಿ
58 ಆಣೆಕಟ್ಟು ಪುನಶ್ಚೇತನಕ್ಕೆ 1500 ಕೋಟಿ ರೂಪಾಯಿ
ಅಲ್ಪಸಂಖ್ಯಾತರ ಅಭಿವೃದ್ಧಿಗೆ 1500 ಕೋಟಿ ರೂ. ಅನುದಾನ
ತಾಯಂದಿರ ಎದೆ ಹಾಲಿನ ಬ್ಯಾಂಕ್ ಸ್ಥಾಪನೆಗೆ 2.5 ಕೋಟಿ ರೂಪಾಯಿ
ಚಾಮರಾಜನಗರ ಜಿಲ್ಲೆಯ ಬೂದಿಪಡಗದಲ್ಲಿ 1 ಕೋಟಿ ರೂಪಾಯಿ ವೆಚ್ಚದಲ್ಲಿ ಆನೆ ಶಿಬಿರ ಆರಂಭ
ಕೃಷಿ ಮತ್ತು ಪೂರಕ ಚಟುವಟಿಕೆಗಳ ವಲಯಕ್ಕೆ 31,028 ಕೋಟಿ ರೂಪಾಯಿ
ಸರ್ವೋದಯ ಮತ್ತು ಕ್ಷೇಮಾಭಿವೃದ್ಧಿ ವಲಯಕ್ಕೆ 62,150 ಕೋಟಿ
ಆರ್ಥಿಕ ಮತ್ತು ಅಭಿವೃದ್ಧಿ ವಲಯಕ್ಕೆ 52,529 ಕೋಟಿ
ಬೆಂಗಳೂರು ಸಮಗ್ರ ಅಭಿವೃದ್ಧಿ ವಲಯಕ್ಕೆ 7,795 ಕೋಟಿ ರೂಪಾಯಿ
ಸಂಸ್ಕೃತಿ, ಪರಂಪರೆ ಹಾಗೂ ನೈಸರ್ಗಿಕ ಸಂಪನ್ಮೂಲ ಸಂರಕ್ಷಣೆಗೆ 2,645 ಕೋಟಿ ರೂ. ಅನುದಾನ