

ಬೆಂಗಳೂರು: ಕಳೆದ ಎರಡು ತಿಂಗಳ ಅವಧಿಯಲ್ಲಿ ಹಂತ ಹಂತವಾಗಿ ಐಪಿಎಸ್, ಡಿವೈಎಸ್ಪಿ ಹಾಗೂ ಇನ್ಸ್ಪೆಕ್ಟರ್ ಶ್ರೇಣಿಯ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗುತ್ತಿದೆ. ಇದೀಗ ಒಂದೇ ಬಾರಿಗೆ 40 ಜನ ಡಿವೈಎಸ್ಪಿ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಹೊಸ ಆದೇಶ ಹೊರಡಿಸಿದೆ.
ಚುನಾವಣಾ ಹೊಸ್ತಿಲಿನಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಪೊಲೀಸ್ ಅಧಿಕಾರಿಗಳ ವರ್ಗಾವಣೆ ನಡೆಯುತ್ತಿದೆ. ಕಳೆದ ವಾರ ಜ.25ರಂದು ಒಂದೇ ದಿನ 23 ಡಿವೈಎಸ್ಪಿಗಳ ವರ್ಗಾವಣೆ ಆದೇಶ ಹೊರಬಂದಿತ್ತು. ಇದೀಗ ಮತ್ತೊಮ್ಮೆ 40 ಡಿವೈಎಸ್ಪಿಗಳು ವರ್ಗಾವಣೆಯಾಗುತ್ತಿದ್ದು, ಕೂಡಲೇ ಸೂಚಿಸಿದ ವಿಭಾಗದಲ್ಲಿ ಕರ್ತವ್ಯಕ್ಕೆ ಹಾಜರಾಗುವಂತೆ ಸರ್ಕಾರ ಸೂಚಿಸಿದೆ.
ಈ ಆದೇಶ ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದುಸೂಚಿಸಲಾಗಿದ್ದು, ಈ ಕೆಳಗಿನ ಪಟ್ಟಿಯಲ್ಲಿ ವರ್ಗಾವಣೆ ಆಗಿರುವ ಡಿವೈಎಸ್ಪಿಗಳು ಮತ್ತು ಅವರ ಹೊಸ ಕಾರ್ಯಸ್ಥಾನಗಳನ್ನು ನಮೂದಿಸಲಾಗಿದೆ.