

ಬೆಂಗಳೂರು: ಕೇರಳದಲ್ಲಿ ಕೋವಿಡ್ 19ನ ಉಪತಳಿ ಜೆಎನ್.1 ಪ್ರಕರಣ ಪತ್ತೆಯಾಗಿದ್ದು, ಇದೀಗ ಕೋವಿಡ್ ಸೋಂಕುಗಳು ಕೂಡ ಕ್ರಮೇಣವಾಗಿ ಏರಿಕೆಯಾಗುತ್ತಿದೆ. ಕೋವಿಡ್ ಕೇಸ್ನಲ್ಲಿ ಹೆಚ್ಚಳ ಕಂಡಬಂದ ಬೆನ್ನಲ್ಲೇ ಹೈಅಲರ್ಟ್ ಆದ ರಾಜ್ಯ ಸರ್ಕಾರ ತಕ್ಷಣವೇ ಸಾರ್ವಜನಿಕರು ಮುನ್ನೆಚ್ಚರಿಕಾ ಕ್ರಮವಾಗಿ ಪಾಲಿಸಬೇಕಾದ ಅಗತ್ಯ ಮಾರ್ಗಸೂಚಿಗಳನ್ನು ಇದೀಗ ಪ್ರಕಟಿಸಿದೆ. ಇವುಗಳನ್ನು ಪಾಲಿಸುವುದು ಕಡ್ಡಾಯ ಎಂದು ಕೂಡ ಒತ್ತಿ ಹೇಳಿದೆ.
ಇದನ್ನೂ ಓದಿ: ಡಾ.ಅಂಬೇಡ್ಕರ್ ಆಶಯ ಈಡೇರಿಕೆ ನಮ್ಮ ಹೊಣೆ
ವಸ್ತುತ, ದೇಶದ ಕೋವಿಡ್ 19ನೇ ಅಂಕಿ-ಅಂಶಗಳು, ಕೇರಳ ಕೋವಿಡ್ 19ರ ಪ್ರಕರಣಗಳ ಸಂಖ್ಯೆ ಯುಎಸ್, ತಮಿಳುನಾಡು ಮತ್ತು ಕೇರಳ ರಾಜ್ಯದಲ್ಲಿ ಕೊರೊನಾ 19 ಉಪತಳಿ ಜೆಎನ್.1 ವರದಿಯಾಗಿರುವುದು, ಚಳಿಗಾಲದ ಹವಾಮಾನ, ಕ್ರಿಸ್ ಮಾಸ್ ಮತ್ತು ಹೊಸವರ್ಷಾಚರಣೆಯ ಸಂದರ್ಭದಲ್ಲಿ ಸಂಭವನೀಯ ಜನದಟ್ಟಣೆ, ಈ ಎಲ್ಲಾ ಘಟಕಗಳನ್ನು ಗಮನದಲ್ಲಿಟ್ಟುಕೊಂಡು, ರಾಜ್ಯ ತಾಂತ್ರಿಕ ಸಲಹಾ ಸಮಿತಿಯು ಶಿಫಾರಸ್ಸು ಮಾಡಿರುವ ಈ ಕೆಳಗಿನ ಅಂಶಗಳನ್ನು ಸಾರ್ವಜನಿಕರು ಪಾಲಿಸುವಂತೆ ಸಲಹೆ ಸೂಚನೆಗಳನ್ನು ನೀಡಲಾಗಿದೆ.
1. ಎಲ್ಲಾ ಹಿರಿಯ ನಾಗರೀಕರು (60 ವರ್ಷ ಮತ್ತು ಮೇಲ್ಪಟ್ಟವರು), ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು (ವಿಶೇಷವಾಗಿ ಕಿಡ್ನಿ, ಹೃದಯ, ಲಿವರ್ ಸಮಸ್ಯೆಗಳು), ಗರ್ಭಿಣಿಯರು, ಎದೆ ಹಾಲುಣಿಸುವ ತಾಯಂದಿರು, ಹೊರಾಂಗಣ ಪ್ರದೇಶಗಳಿಗೆ ತೆರಳಿದಾಗ ಮಾಸ್ಕ್ ಧರಿಸಬೇಕು. ಅಗತ್ಯ ಗಾಳಿ-ಬೆಳಕಿನ ವ್ಯವಸ್ಥೆಯಿಲ್ಲದ ಮತ್ತು ಹೆಚ್ಚು ಜನಸಂದಣಿಯಿರುವ ಪ್ರದೇಶಗಳಿಗೆ ತೆರಳದಿರುವುದು.
2. ಜ್ವರ, ಕೆಮ್ಮು, ನೆಗಡಿ, ಇತ್ಯಾದಿ ಸೋಂಕಿನ ಲಕ್ಷಣಗಳನ್ನು ಹೊಂದಿರುವವರು ತಕ್ಷಣದ ವೈದ್ಯಕೀಯ ಸಲಹೆಯನ್ನು ಪಡೆಯಬೇಕು. ಮೂಗು ಮತ್ತು ಬಾಯಿ ಮುಚ್ಚುವಂತೆ ಮಾಸ್ಕ್ ಧರಿಸುವುದು, ಗಾಳಿ-ಬೆಳಕಿನ ವ್ಯವಸ್ಥೆಯಿಲ್ಲದ ಮತ್ತು ಹೆಚ್ಚು ಜನಸಂದಣಿಯಿರುವ ಪುದೇಶಗಳಿಗೆ ಭೇಟಿ ನೀಡುವುದು ಮುಖ್ಯ ಲಕ್ಷಣವಾಗಿದೆ.
3. ಉತ್ತಮ ವೈಯಕ್ತಿಕ ಸಂಭೋಗ, ಪದೇ ಪದೇ ಕೈಗಳನ್ನು ಮತ್ತು ನೀರಿನಿಂದ ತೊಳೆಯುವುದು, ಇತ್ಯಾದಿಗಳ ನಿರ್ವಹಣೆಯು ಅಗತ್ಯವಾಗಿರುತ್ತದೆ.
4. ಆರೋಗ್ಯ ಸಮಸ್ಯೆಗಳು ಕಂಡುಬಂದಲ್ಲಿ, ಮನೆಯಲ್ಲಿರುವುದು ಸೂಕ್ತ. ಇತರ ವ್ಯಕ್ತಿಗಳೊಂದಿಗೆ ವಿಶೇಷವಾಗಿ ಹಿರಿಯ ನಾಗರೀಕರು ದುರ್ಬಲರನ್ನು (vulnerable) ಅವಶ್ಯವಿದ್ದಲ್ಲಿ ಮಾತ್ರವೇ ಭೇಟಿ ಮಾಡುವುದು. ಆರೋಗ್ಯ ಸಮಸ್ಯೆಗಳನ್ನು ಹೊಂದಿದವರು, ಜನಸಂದಣಿಯವರಿಗೆ ಭೇಟಿ ನೀಡಬೇಕಾದ ಸಂದರ್ಭದಲ್ಲಿ ಮಾಸ್ಕ್ ಧರಿಸುವಂತೆ ಸಲಹೆ ನೀಡಲಾಗುವುದು.
5. ಅಂತಾರಾಷ್ಟ್ರೀಯ ಪ್ರಯಾಣದ ಸಂದರ್ಭದಲ್ಲಿ ಎಚ್ಚರಿಕೆಯಿಂದ, ವಿಮಾನ ನಿಲ್ದಾಣದಲ್ಲಿ ಮತ್ತು ವಿಮಾನದ ಒಳಗೆ ಮಾಸ್ಕ್ ಧರಿಸುವುದು. ಹೆಚ್ಚಿನ ಗಾಳಿ-ಬೆಳಕು ಇಲ್ಲದ ಮತ್ತು ಜನದಟ್ಟಣೆ ಇರುವ ಸ್ಥಳಗಳಿಗೆ ತೆರಳದಿರುವುದು ಸೇರಿದಂತೆ ಇತರ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಪಾಲಿಸುವುದು ಸೂಕ್ತ.
ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ, ಕೋವಿಡ್ -19 ಮುಂಜಾಗ್ರತಾ ಕ್ರಮಗಳ ಕುರಿತು ಸಾರ್ವಜನಿಕರಿಗೆ ಸೂಚಿಸುವ ಎಲ್ಲಾ ಪದಾರ್ಥಗಳ ಲಭ್ಯ ಮಾಧ್ಯಮಗಳ ಮೂಲಕ ಪ್ರಚುರಪಡಿಸುವಂತೆ ಮತ್ತು ಸಾರ್ವಜನಿಕರಲ್ಲಿ ಇವುಗಳ ವಾಲನವನ್ನು ಖಚಿತಪಡಿಸಿಕೊಳ್ಳುವುದು . ಬಿಬಿಎಂಪಿ ಹಾಗೂ ಅದರ ಜವಾಬ್ದಾರಿಯಾಗಿರುತ್ತದೆ ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಿದೆ.