

ಬೆಂಗಳೂರು: ಕರವಾಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಇಂದಿನಿಂದ ಐದು ದಿನಗಳ ಕಾಲ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಆದರೆ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ತಗ್ಗಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಹಾವೇರಿ ಸೇರಿದಂತೆ ಇತರೆ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಯ ಬಳಿಕ ಮಳೆಯ ಬೀಳುವ ಪ್ರಮಾಣ ಕಡಿಮೆಯಾಗಲಿದೆ.
ದಕ್ಷಿಣ ಒಳನಾಡು ಹಾಗೂ ಮಲೆನಾಡಿನಲ್ಲಿ ಏಕಾಏಕಿ ಮಳೆಯ ಪ್ರಮಾಣ ಕುಸಿತವಾಗಿದೆ. ಪರಿಣಾಮ ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮೈಸೂರು, ರಾಮನಗರ, ತುಮಕೂರು, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳ ವಿವಿದ ಭಾಗಗಳಲ್ಲಿ ಇಂದಿನಿಂದ ಹಗುರ ಮಳೆಯಾಗಲಿದೆ.