ರಾಜ್ಯದಲ್ಲಿಂದು 40 ಸಾವಿರ ಗಡಿದಾಟಿದ ಕೋವಿಡ್‌; 21 ಸೋಂಕಿತರ ಸಾವು

Covid
Published on

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋವಿಡ್‌ ಸೋಂಕಿತರ ಸಂಖ್ಯೆ ಏರುತ್ತಲೇ ಇದ್ದು, ಇಂದು ಹೊಸದಾಗಿ 40,499 ಜನರಿಗೆ ಸೋಂಕು ದೃಢಪಟ್ಟಿದೆ.

ಬೆಂಗಳೂರಿನಲ್ಲಿ 24,135 ಮಂದಿಗೆ ಸೋಂಕು ತಗುಲಿದೆ. ರಾಜ್ಯದಲ್ಲಿ ಇಂದು ಕೋವಿಡ್​​ನಿಂದ 21 ಮಂದಿ ಸಾವನ್ನಪ್ಪಿದ್ದು, ಅದರಲ್ಲಿ ಐದು ಸಾವು ರಾಜಧಾನಿಯಲ್ಲಿ ದಾಖಲಾಗಿದೆ. ಇಂದಿನ ಪಾಸಿಟಿವಿಟಿ ರೇಟ್ ಶೇ. 18.80ರಷ್ಟು​ ಇದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮೂಲಕ ತಿಳಿಸಿದ್ದಾರೆ.

ಇಂದು 2,15,312 ಮಂದಿಗೆ ಕರೊನಾ ಪರೀಕ್ಷೆ ನಡೆಸಲಾಗಿದ್ದು, 23,209 ಜನರು ಚೇತರಿಸಿಕೊಂಡಿದ್ದಾರೆ. ಸದ್ಯ ರಾಜ್ಯಾದ್ಯಂತ 2,67,650 ಮಂದಿ ಹಾಗೂ ಬೆಂಗಳೂರಿನಲ್ಲೇ 1ಲಕ್ಷದ 84 ಸಾವಿರ ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಸಚಿವರು ಮಾಹಿತಿ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net