ಸಾರಿಗೆ ಸಂಸ್ಥೆ ನೌಕರರ ವರ್ಗಾವಣೆ; ಆಕ್ಷೇಪಣೆ ಸಲ್ಲಿಸಲು ಜು.10ರ ವರೆಗೆ ಅವಕಾಶ

KSRTC
Published on

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್​ಆರ್​ಟಿಸಿ), ವಾಯುವ್ಯ ರಸ್ತೆ ಸಾರಿಗೆ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಹಾಗೂ ಬಿಎಂಟಿಸಿ ಸಂಸ್ಥೆಗಳ ದರ್ಜೆ-3 ಮೇಲ್ವಿಚಾರಕೇತರ ಮತ್ತು ದರ್ಜೆ-4 ನೌಕರರ 2023ನೇ ಸಾಲಿನ ಅಂತರ ನಿಗಮ ವರ್ಗಾವಣೆಗೆ 958 ನೌಕರರು ಅರ್ಜಿ ಸಲ್ಲಿಸಿದ್ದಾರೆ. ಈ ಪೈಕಿ 616 ನೌಕರರು ಕೋರಿಕೆ ಮೇರೆಗೆ ಅಂತರ ನಿಗಮ ಪರಸ್ಪರ ವರ್ಗಾವಣೆಗೊಂಡಿರುತ್ತಾರೆ.

ಆದೇಶವನ್ನು http://ksrtc.karnataka.gov.in ಪ್ರಕಟಿಸಲಾಗಿದೆ ಎಂದು ಕೆಎಸ್​ಆರ್​ಟಿಸಿ ತಿಳಿಸಿದೆ. ಆದೇಶಕ್ಕೆ ಲಿಖಿತ ಆಕ್ಷೇಪಣೆ ಸಲ್ಲಿಸಲು ಜು.10ರವರೆಗೆ ಅವಕಾಶವಿದೆ.

ನೌಕರರು ಆಕ್ಷೇಪಣೆಗಳನ್ನು ಸಂಬಂಧಪಟ್ಟ ವಿಭಾಗದ ಆಡಳಿತಾಧಿಕಾರಿಗಳಿಗೆ ಸಲ್ಲಿಸಿ, ಸ್ವೀಕೃತಿ ಪಡೆಯಬೇಕು. ವೈಯಕ್ತಿಕವಾಗಿ ಅಥವಾ ಅಂಚೆಯ ಮೂಲಕ ಕೇಂದ್ರ ಕಚೇರಿಗೆ ಸಲ್ಲಿಸುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net