ಫೆಬ್ರವರಿ 1ರಿಂದ ಎರಡು ದಿನ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆ! ಹವಾಮಾನ ಮುನ್ಸೂಚನೆ..Karnataka Weather

Heavy Rain
Published on

ಬೆಂಗಳೂರು: ( Karnataka Weather ) ಕರ್ನಾಟಕ ರಾಜ್ಯದಲ್ಲಿ ಉಂಟಾಗಿದ್ದ ಚಳಿ ವಾತಾವರಣ ಇನ್ನೇನು ಕಡಿಮೆ ಆಯಿತು ಎನ್ನುವಷ್ಟರಲ್ಲಿ ಭಾರತೀಯ ಹವಾಮಾನ ಇಲಾಖೆ ಮಳೆಯ ಎಚ್ಚರಿಕೆ ನೀಡಿದೆ. ಫೆಬ್ರವರಿ 1ರಿಂದ ಎರಡು ದಿನಗಳ ಕಾಲ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ಇದೆ.

ಇಂದಿನಿಂದ ಮುಂದಿನ ಕೆಲವು ದಿನಗಳ ಒಣಹವೆ ಮುಂದುವರಿಯಲಿದೆ. ಮುಂದಿನ 5ರಿಂದ 7ದಿನಗಳ ಮುನ್ಸೂಚನೆ ವರದಿಯಲ್ಲಿ ಎರಡು ದಿನ 20 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸುರಿಯುವು ನಿರೀಕ್ಷೆ ಇದೆ ಎಂದು ಐಎಂಡಿ ತಿಳಿಸಿದೆ. ಕರ್ನಾಟಕದಲ್ಲಿ ಮತ್ತೆ ಮಳೆಯಾಗುವ ಮುನ್ಸೂಚನೆ ದೊರೆತಿದೆ. ಫೆಬ್ರವರಿ 1 ರಿಂದ ಬೆಂಗಳೂರು ಸೇರಿ ರಾಜ್ಯದ ಬಹುತೇಕ ಕಡೆಗಳಲ್ಲಿ ಮಳೆಯಾಗಲಿದೆ.

ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ಕೊಡಗು, ಚಿಕ್ಕಮಗಳೂರು, ಚಾಮರಾಜನಗರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ವಿಜಯಪುರ, ಹಾವೇರಿ, ಗದಗ, ಧಾರವಾಡ, ಬಾಗಲಕೋಟೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆಯಲ್ಲಿ ಒಣಹವೆ ಮುಂದುವರೆಯಲಿದೆ. ಬೆಂಗಳೂರಿನಲ್ಲಿ ಚಳಿ ಇದ್ದು, ಕೆಲವೆಡೆ ಮಂಜು ಕವಿದ ವಾತಾವರಣವಿತ್ತು. ತಮಿಳುನಾಡು, ಕಾರೈಕಲ್, ಕೇರಳ, ಆಂಧ್ರಪ್ರದೇಶದ ಕರಾವಳಿ, ಕರ್ನಾಟಕದಲ್ಲಿ ಮಳೆಯಾಗಲಿದೆ.

ಇಂದಿನಿಂದ ಮುಂದಿನ ನಾಲ್ಕು ದಿನಗಳಲ್ಲಿ ಚಳಿಯಲ್ಲಿ ಏರಿಳಿತ ಮುಂದುವರಿಯಲಿದೆ. ನಂತರ ಡಿಸೆಂಬರ್ 31 ರಿಂದಲೇ ವಾತಾವರಣದಲ್ಲಿ ತೀವ್ರ ರೂಪದಲ್ಲಿ ಬದಲಾವಣೆ ಆಗಲಿದೆ. ಅಂದು ಸಹ ಬೆಂಗಳೂರು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಮಳೆ ಆಗಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net