ಬೆಳಗಾವಿಯನ್ನು ಪ್ರತ್ಯೇಕಿಸುವ ಬಾಲಿಶ ಹೇಳಿಕೆಗಳನ್ನು ಕರ್ನಾಟಕ ಸಹಿಸುವುದಿಲ್ಲ: CM Siddaramaiah

MUDA case
Published on

ಬೆಳಗಾವಿ: ಬೆಳಗಾವಿಯ ಕುರಿತು ಮಹಾಜನ್ ಆಯೋಗದ ವರದಿಯೇ ಅಂತಿಮವಾಗಿದ್ದು, ಪದೇಪದೆ ಜಿಲ್ಲೆಯನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಎನ್ನುವುದು ಅವರ ಮೂರ್ಖತನ. ಈ ಬಗ್ಗೆ ನೀಡಲಾಗುತ್ತಿರುವ ಬಾಲಿಶವಾದ ಹೇಳಿಕೆಗಳನ್ನು ಕರ್ನಾಟಕ ಸರ್ಕಾರ ಸಹಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ(CM Siddaramaiah) ತಿಳಿಸಿದರು.

ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿಸುವ ಕೂಗು ಕುರಿತಂತೆ ಮಾಧ್ಯಮದವರ ಪ್ರಶ್ನೆಗೆ ಬೆಳಗಾವಿಯಲ್ಲಿ ಮಂಗಳವಾರ ಈ ರೀತಿ ಪ್ರತಿಕ್ರಿಯೆ ನೀಡಿದರು.

ಹೋರಾಟಕ್ಕೆ ವಿರೋಧವಿಲ್ಲ

ಪಂಚಮಸಾಲಿ ಸಮುದಾಯದ ಮೀಸಲಾತಿ ಹೋರಾಟದ ಬಗ್ಗೆ ಪ್ರತಿಕ್ರಿಯೆ ನೀಡಿ, ಪಂಚಮಸಾಲಿ ಸಮುದಾಯದ ಮುಖಂಡರನ್ನು ಚರ್ಚೆಗೆ ಕರೆದಿದ್ದರೂ, ಅವರು ಆಗಮಿಸಿಲ್ಲ. ಪ್ರಜಾಪ್ರಭುತ್ವದಲ್ಲಿ ಹೋರಾಟ ಕೈಗೊಳ್ಳಲು ಅವಕಾಶವಿದ್ದು, ಹೋರಾಟಕ್ಕೆ ನಮ್ಮ ವಿರೋಧವಿಲ್ಲ ಎಂದು ಸ್ಪಷ್ಟಪಡಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net