ರಾಜಸ್ಥಾನ ಚುನಾವಣೆ ಸ್ಟಾರ್ ಪ್ರಚಾರಕರಾಗಿ ಕರ್ನಾಟಕದ ಬಿವಿಶ್ರೀ

bvv
Published on

ಬೆಂಗಳೂರು: ರಾಜಸ್ಥಾನ ವಿಧಾನಸಭಾ ಚುನಾವಣೆಗೆ ಎಐಸಿಸಿ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆಗೊಳಿಸಿದ್ದು, ಕರ್ನಾಟಕದ ಬಿ.ವಿ. ಶ್ರೀನಿವಾಸ್ ಸ್ಥಾನ ಪಡೆದಿದ್ದಾರೆ.

ನವೆಂಬರ್ 25ರಂದು ಮತದಾನ ನಡೆಯಲಿದ್ದು, ಪ್ರಚಾರದ ಅಬ್ಬರ ಆರಂಭವಾಗಿದೆ. ಎಐಸಿಸಿ 40 ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಪ್ರಕಟಿಸಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾಗಾಂಧಿ, ರಾಹುಲ್, ಪ್ರಿಯಾಂಕ, ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್, ಸಚಿನ್ ಪೈಲೆಟ್, ಶಶಿ ತರೂರ್, ಕನ್ಹಯ್ಯ ಕುಮಾರ್, ಜಿಗ್ನೇಶ್ ಮೇವಾನಿ ಪಟ್ಟಿಯಲ್ಲಿರುವ ಪ್ರಮುಖರು. ಈ ಪಟ್ಟಿಯಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ ಶ್ರೀನಿವಾಸ್ ಕೂಡ ಅವಕಾಶ ಪಡೆದುಕೊಂಡಿದ್ದಾರೆ. ಇವರು ಮೂಲತಃ ಶಿವಮೊಗ್ಗ ಜಿಲ್ಲೆ ಭದ್ರಾವತಿಯವರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net