ದ್ವಿತೀಯ ಪಿಯುಸಿ 2ನೇ ಪೂರಕ ಪರೀಕ್ಷೆ ಆಗಸ್ಟ್ 21 ರಿಂದ ಆರಂಭ

puc (1)
Published on

ಬೆಂಗಳೂರು: 2022-23ನೇ ಸಾಲಿನ ದ್ವಿತೀಯ ಪಿ.ಯು.ಸಿ. ಪೂರಕ ಪರೀಕ್ಷೆ-2 ಅನ್ನು ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯ ವತಿಯಿಂದ ನಡೆಸಲಾಗುವುದು.

2022-23ನೇ ಸಾಲಿನಲ್ಲಿ ಹಾಗೂ ಅದಕ್ಕಿಂತ ಹಿಂದಿನ ಸಾಲುಗಳಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆಗೆ ನೋಂದಾಯಿಸಲು ಅರ್ಹರಾಗಿರುತ್ತಾರೆ. ಫಲಿತಾಂಶ ತಿರಸ್ಕರಿಸಲು ಸದರಿ ಪರೀಕ್ಷೆಯಲ್ಲಿ ಅವಕಾಶವಿರುವುದಿಲ್ಲ.

ಪರೀಕ್ಷೆ ಸಂಬಂಧಿಸಿದ ಸುತ್ತೋಲೆ ಹಾಗೂ ವೇಳಾಪಟ್ಟಿಯನ್ನು ಮಂಡಲಿಯ ಜಾಲತಾಣದಲ್ಲಿ https://kseab.karnataka.gov.in ಪ್ರಕಟಿಸಲಾಗಿದೆ. ಈ ಅವಕಾಶವನ್ನು ಅರ್ಹ ವಿದ್ಯಾರ್ಥಿಗಳು ಉಪಯೋಗಿಸಿಕೊಳ್ಳಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ತಿಳಿಸಿದೆ. ಪರೀಕ್ಷೆಯು ಆಗಸ್ಟ್ 21ರಿಂದ ಪ್ರಾರಂಭವಾಗಲಿದ್ದು, ಸೆಪ್ಟೆಂಬರ್ 2 ಕ್ಕೆ ಮುಕ್ತಾಯವಾಗಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net