ರಾಜ್ಯದಲ್ಲಿ 8 ಹೊಸ ಸೋಂಕು ಪ್ರಕರಣ: ಎಲ್ಲೆಲ್ಲಿ ಎಷ್ಟೆಷ್ಟು?

Corona
Published on

ಬೆಂಗಳೂರು: ರಾಜ್ಯದಲ್ಲಿ ನಿನ್ನೆ ಸಂಜೆ 5 ಗಂಟೆಯಿಂದ ಇಲ್ಲಿಯವರೆಗೆ ಎಂಟು ಹೊಸ ಪ್ರಕರಣಗಳು ಬೆಳಕಿಗೆ ಬಂದಿವೆ. ಬೆಂಗಳೂರು ನಗರದಲ್ಲಿ ಮೂರು, ಬಾಗಲಕೋಟೆಯಲ್ಲಿ ಎರಡು ಹಾಗೂ ಬಳ್ಳಾರಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ತಲಾ ಒಂದೊಂದು ಹೊಸ ಪ್ರಕರಣಗಳು ಪತ್ತೆಯಾಗಿವೆ.

ಈ ಮೂಲಕ ರಾಜ್ಯದಲ್ಲಿ ಇದುವರೆಗಿನ ಸೋಂಕಿತರ ಸಂಖ್ಯೆ 659 ಆಗಿದೆ. ಈ ಪೈಕಿ 324 ಮಂದಿ ಈಗಾಗಲೇ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. 28 ಮಂದಿ ಮೃತಪಟ್ಟಿದ್ದು ಉಳಿದವರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಿನ್ನೆ ಸಂಜೆಯಿಂದ ಪತ್ತೆಯಾಗಿರುವ ಹೊಸ ಪ್ರಕರಣಗಳಲ್ಲಿ ಕೂಡ 45 ವರ್ಷಕ್ಕಿಂತ ಕಡಿಮೆ ವಯಸ್ಸಿನವರೇ ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ. ಬೆಂಗಳೂರು ನಗರದಲ್ಲಿ 34, 45 ವರ್ಷದ ಪುರುಷರು ಹಾಗೂ 30 ವರ್ಷದ ಮಹಿಳೆಗೆ ಸೋಂಕು ತಗುಲಿದ್ದರೆ, ಬಾಗಲಕೋಟೆಯಲ್ಲಿ 29 ವರ್ಷದ ಓರ್ವ ಪುರುಷ ಹಾಗೂ ಓರ್ವ ಮಹಿಳೆ ಸೋಂಕು ಪೀಡಿತರಾಗಿದ್ದಾರೆ. ಬಳ್ಳಾರಿಯಲ್ಲಿ 43 ವರ್ಷದ ಪುರುಷ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 51 ವರ್ಷದ ಪುರುಷ ಹಾಗೂ ಭಟ್ಕಳದಲ್ಲಿ 28 ವರ್ಷದ ಯುವಕನಲ್ಲಿ ಸೋಂಕು ಪತ್ತೆಯಾಗಿದೆ.

ನಿಜಾಮುದ್ದೀನ್‌ ಮರ್ಕಜ್‌ ಮಸೀದಿಯಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿರುವ ಪ್ರತಿಯೊಬ್ಬರೂ ಉಚಿತ ಆರೋಗ್ಯ ಸಹಾಯವಾಣಿ 080-29711171 ಸಂಪರ್ಕಿಸುವಂತೆ ಸರ್ಕಾರ ಸೂಚಿಸಿದೆ.

ಸೋಂಕಿತರ ಪ್ರಯಾಣದ ಮಾಹಿತಿ ಬೇಕಿದ್ದರೆ www.karnataka.gov.in. ಮೊಬೈಲ್‌ ಅಪ್ಲಿಕೇಷ್‌ ಡೌನ್‌ಲೋಡ್‌ ಮಾಡಿಕೊಳ್ಳುವಂತೆ ಸರ್ಕಾರದ ಪ್ರಕಟಣೆ ತಿಳಿಸಿದೆ. ಕರೊನಾ ವೈರಸ್‌ ಉಚಿತ ಆರೋಗ್ಯ ಸಹಾಯವಾಣಿ ಸಂಖ್ಯೆ: 104/ 9745697456.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net