ರಾಜ್ಯದಲ್ಲಿಂದು 1,869 ಕರೊನಾ ಪ್ರಕರಣ ದೃಢ; ಯಾವ ಜಿಲ್ಲೆಯಲ್ಲಿ ಎಷ್ಟು ಕೇಸ್?

corona1
Published on

ಬೆಂಗಳೂರು: ರಾಜ್ಯದಲ್ಲಿ ಪ್ರತಿನಿತ್ಯ ಕರೊನಾ ಸೋಂಕಿನ ಪ್ರಮಾಣ ಇಳಿಕೆ ಕಾಣುತ್ತಿದ್ದು, ಇಂದು 1,869 ಜನರಲ್ಲಿ ಸೋಂಕು ದೃಢವಾಗಿದೆ. ಈ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 28,82,239ಕ್ಕೆ ಏರಿಕೆಯಾಗಿದೆ. ಒಂದೇ ದಿನದಲ್ಲಿ 42 ಸೋಂಕಿತರು ಸಾವನ್ನಪ್ಪಿದ್ದು, ಮೃತರ ಸಂಖ್ಯೆ 36,121ಕ್ಕೆ ಹೆಚ್ಚಿದೆ.


ಕಳೆದ 24 ಗಂಟೆಗಳಲ್ಲಿ 3,144 ಸೋಂಕಿತರು ಗುಣಮುಖವಾಗಿ, ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೆ 28,16,013 ಸೋಂಕಿತರು ಗುಣಮುಖರಾಗಿದ್ದಾರೆ. ಸದ್ಯ 30,082 ಸಕ್ರಿಯ ಪ್ರಕರಣಗಳು ಬಾಕಿಯುಳಿದಿವೆ. ಇಂದಿನ ಕರೊನಾ ಪಾಸಿಟಿವಿಟಿ ಪ್ರಮಾಣ ಶೇ. 1.30ರಷ್ಟಿದ್ದರೆ ಮರಣ ಪ್ರಮಾಣ ಶೇ. 2.24ರಷ್ಟಿದೆ ಎಂದು ರಾಜ್ಯ ಆರೋಗ್ಯ ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ.


ಬೆಂಗಳೂರಿನಲ್ಲಿ ಅತಿ ಹೆಚ್ಚು ಅಂದರೆ 432 ಪ್ರಕರಣಗಳು ಕಾಣಿಸಿಕೊಂಡಿವೆ. ಈ ಮೂಲಕ ನಗರದ ಒಟ್ಟಾರೆ ಪ್ರಕರಣಗಳ ಸಂಖ್ಯೆ 12,21,803ಕ್ಕೆ ಏರಿದೆ. ಅದರಲ್ಲಿ ಇಂದು 635 ಸೋಂಕಿತರು ಸೇರಿ ಒಟ್ಟು 11,93,848 ಸೋಂಕಿತರು ಗುಣಮುಖರಾಗಿದ್ದಾರೆ. ಸದ್ಯ 12,167 ಸಕ್ರಿಯ ಪ್ರಕರಣಗಳಿವೆ. ನಗರದಲ್ಲಿ ಇಂದು ಆರು ಸೇರಿ ಈವರೆಗೆ 15,787 ಸೋಂಕಿತರು ಬಲಿಯಾಗಿದ್ದಾರೆ.


ದಕ್ಷಿಣ ಕನ್ನಡದಲ್ಲಿ 218, ಮೈಸೂರಿನಲ್ಲಿ 207, ಹಾಸನ 173, ಚಿಕ್ಕಮಗಳೂರು 101, ಬೆಳಗಾವಿ 97, ತುಮಕೂರಿನಲ್ಲಿ 92, ಉಡುಪಿಯಲ್ಲಿ 94 ಪ್ರಕರಣಗಳು ದೃಢವಾಗಿವೆ. ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿಯಲ್ಲಿ ಸೋಂಕಿತರ ಸಂಖ್ಯೆ ಒಂದಂಕಿಯಲ್ಲಿದೆ. ಗದಗದಲ್ಲಿ ಇಂದು ಒಂದೂ ಪ್ರಕರಣ ದೃಢವಾಗಿಲ್ಲ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net