ಕಾರ್ತಿಕೇಯನ್ ಹತ್ಯೆ ಪ್ರಕರಣ, ಮೂವರ ವಶ

arrested
Published on

ಬೆಂಗಳೂರು: ರಿಯಲ್ ಎಸ್ಟೇಟ್ ಉದ್ಯಮಿ ಕಾರ್ತಿಕೇಯನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ
ಹಣಕಾಸಿನ ವಿಚಾರ ಹಾಗೂ ಹಳೇ ದ್ವೇಷದ ಹಿನ್ನೆಲೆಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದ ಕಾರ್ತಿಕೇಯನ್(೪೦)ನನ್ನು ಮಂಗಳವಾರ ರಾತ್ರಿ ೭ ಗಂಟೆ ಸುಮಾರಿಗೆ ಆರ್.ಎಸ್.ಪಾಳ್ಯದ ಆತನ ಮನೆ ಸಮೀಪದಲ್ಲಿ ವಾಯುವಿಹಾರ ನಡೆಸುತ್ತಿದ್ದ. ಈ ಸಂದರ್ಭದಲ್ಲಿ ನಾಲ್ಕೈದು ಬೈಕ್‌ಗಳಲ್ಲಿ ಬಂದ ಐದಾರು ಮಂದಿ ದುಷ್ಕರ್ಮಿಗಳು ಕಾರ್ತಿಕೇಯನ್ ಮೇಲೆ ದಾಳಿ ನಡೆಸಿದ್ದರು. ಆಗ ಪ್ರಾಣ ಉಳಿಸಿಕೊಳ್ಳಲು ಕಾರ್ತಿಕೇಯನ್ ಓಡಿದ್ದಾನೆ. ಆದರೂ ಬಿಡದ ಹಂತಕರು, ಸಾರ್ವಜನಿಕವಾಗಿ ನಡು ರಸ್ತೆಯಲ್ಲಿ ಅಟ್ಟಾಡಿಸಿ ಭೀಕರವಾಗಿ ಹತ್ಯೆಗೈದು ಪರಾರಿಯಾಗಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದ ಪೊಲೀಸರು ಮೂವರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಉಳಿದ ಆರೋಪಿಗಳಿಗಾಗಿ ಶೋಧ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net