ಕರೂರು ಕಾಲ್ತುಳಿತ : ಪ್ರಕರಣದ ತನಿಖೆಯನ್ನು ವಹಿಸಿಕೊಂಡ ಸಿಬಿಐ, ಸ್ಥಳಕ್ಕೆ ಅಧಿಕಾರಿಗಳ ಭೇಟಿ| Karur stampede

ವಿಜಯವಾಣಿ - 2025-10-26T141436.043
Published on

ಚೆನ್ನೈ: ತಮಿಳುನಾಡಿನ ಕರೂರಿನಲ್ಲಿ ಸೆ. 27ರಂದು ತಮಿಳು ನಟ ಮತ್ತು ರಾಜಕಾರಣಿ ದಳಪತಿ ವಿಜಯ್ ಅವರ ನಡೆದ ಟಿವಿಕೆ ರಾಜಕೀಯ ರ‍್ಯಾಲಿಯಲ್ಲಿ 41 ಮಂದಿ ಸಾವನ್ನಪ್ಪಿದ ಕಾಲ್ತುಳಿತ(Karur stampede) ಪ್ರಕರಣವನ್ನು ಕೇಂದ್ರ ತನಿಖಾ ದಳ(ಸಿಬಿಐ) ತನಿಖೆಯನ್ನು ವಹಿಸಿಕೊಂಡಿದ್ದು, ಅಧಿಕಾರಿಗಳು ವೇಲುಸ್ವಾಮಿಪುರಂನಲ್ಲಿರುವ ಸ್ಥಳಕ್ಕೆ ಭೇಟಿ ನೀಡಿದ್ದಾರೆ ಎಂದು ಭಾನುವಾರ(ಅ. 26) ವರದಿಯಾಗಿದೆ.

ಸ್ವತಂತ್ರ ತನಿಖೆ ನಡೆಸುವಂತೆ ಕೋರಿ ಟಿವಿಕೆ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿದ್ದ ಸುಪ್ರೀಂಕೋರ್ಟ್​, ಪ್ರಕರಣವನ್ನು ತನಿಖೆಯನ್ನು ನಡೆಸುವಂತೆ ಸಿಬಿಐಗೆ ಆದೇಶ ನೀಡಿತ್ತು. ತನಿಖೆಯನ್ನು ವಹಿಸಿಕೊಳ್ಳಲು ಹಿರಿಯ ಅಧಿಕಾರಿಯನ್ನು ನೇಮಿಸುವಂತೆ ಮತ್ತು ಅಧಿಕಾರಿಯ ಸಹಾಯಕ್ಕಾಗಿ ಇತರ ಕೆಲವು ಅಧಿಕಾರಿಗಳನ್ನು ನೇಮಿಸುವಂತೆ ಸಿಬಿಐ ನಿರ್ದೇಶಕರಿಗೆ ನಿರ್ದೇಶನ ನೀಡಿತ್ತು.

ಸಿಬಿಐ ತನಿಖೆಯನ್ನು ಮೇಲ್ವಿಚಾರಣೆ ಮಾಡಲು ಸುಪ್ರೀಂಕೋರ್ಟ್​ನ  ನಿವೃತ್ತ ನ್ಯಾಯಾಧೀಶ ಅಜಯ್ ರಸ್ತೋಗಿ ನೇತೃತ್ವದಲ್ಲಿ ಮೂವರು ಸದಸ್ಯರ ಮೇಲ್ವಿಚಾರಣಾ ಸಮಿತಿಯನ್ನು ಸಹ ಸ್ಥಾಪಿಸಿದೆ.  ರಾಜ್ಯ ಪೊಲೀಸರು ದಾಖಲಿಸಿದ್ದ ಎಫ್​ಐಆರ್​ ಅನ್ನು ಸಿಬಿಐ ಮರು ನೊಂದಾಯಿಸಿದೆ. ಈ ಬಗ್ಗೆ ನ್ಯಾಯಾಲಯಕ್ಕೂ ಅದನ್ನು ತಿಳಿಸಿದೆ ಎಂದು ವರದಿಗಳು ಉಲ್ಲೇಖಿಸಿವೆ. (ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net